`ದೇಶ-ವಿದೇಶಗಳಲ್ಲಿ ರಾಹುಲ್ ಗಾಂಧಿಯವರ ಜನಪ್ರಿಯತೆ ಬಿಜೆಪಿ ನಾಯಕರ ನಿದ್ದೆ ಕೆಡಿಸಿದೆ`
ಸಿಎಂ ಸಿದ್ದರಾಮಯ್ಯನವರ ಅವರ ಈ ಹೇಳಿಕೆ ಬಿಜೆಪಿ ನಾಯಕ ತಾರ್ ವಿಂದರ್ ಸಿಂಗ್ ಮಾರ್ವಾ ಎಂಬಾತ . ‘‘ಸರಿಯಾಗಿ ನಡೆದುಕೊಳ್ಳದಿದ್ದಲ್ಲಿ ಇಂದಿರಾ ಗಾಂಧಿಯವರಿಗೆ ಆಗಿರುವ ಗತಿಯೇ ನಿನಗೆ ಆಗುತ್ತದೆ’’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಬಂದಿದೆ.
ಬೆಂಗಳೂರು: ದೇಶ-ವಿದೇಶಗಳಲ್ಲಿ ರಾಹುಲ್ ಗಾಂಧಿಯವರ ಜನಪ್ರಿಯತೆ ಬಿಜೆಪಿ ನಾಯಕರ ನಿದ್ದೆ ಕೆಡಿಸಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಮಹಾರಾಷ್ಟ್ರ ಸೇರಿದಂತೆ ಸದ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್ ಗಾಂಧಿಯವರ ಪ್ರಚಾರ ಭಾಷಣಗಳನ್ನು ತಡೆಯುವುದು ಕೂಡಾ ಈ ಬೆದರಿಕೆಯ ಹಿಂದಿನ ದುರುದ್ದೇಶವಾಗಿದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಅವರ ಈ ಹೇಳಿಕೆ ಬಿಜೆಪಿ ನಾಯಕ ತಾರ್ ವಿಂದರ್ ಸಿಂಗ್ ಮಾರ್ವಾ ಎಂಬಾತ . ‘‘ಸರಿಯಾಗಿ ನಡೆದುಕೊಳ್ಳದಿದ್ದಲ್ಲಿ ಇಂದಿರಾ ಗಾಂಧಿಯವರಿಗೆ ಆಗಿರುವ ಗತಿಯೇ ನಿನಗೆ ಆಗುತ್ತದೆ’’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಬಂದಿದೆ.
ದೂಷಣೆ, ನಿಂದನೆ, ಸುಳ್ಳು ಆರೋಪ ಮತ್ತು ಚಾರಿತ್ರ್ಯಹನನದ ಮೂಲಕ ಲೋಕಸಭೆಯ ವಿರೋಧ ಪಕ್ಷದ ನಾಯಕರು ಮತ್ತು ನಮ್ಮ ಪಕ್ಷದ ನೇತಾರರಾದ ರಾಹುಲ್ ಗಾಂಧಿ ಅವರನ್ನು ಹಣಿಯಲು ಸತತವಾಗಿ ಪ್ರಯತ್ನಪಡುತ್ತಾ ಬಂದ ಬಿಜೆಪಿ, ಈಗ ನೇರವಾಗಿ ಕೊಲೆ ಬೆದರಿಕೆ ಒಡ್ಡುವಂತಹ ಹೀನಾತಿಹೀನ ಪ್ರಯತ್ನಕ್ಕೆ ಇಳಿದಂತೆ ಕಾಣುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದು ರಾಹುಲ್ ಗಾಂಧಿಯವರು ಮತ್ತು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಮತ್ತು ಸೈದ್ಧಾಂತಿಕವಾಗಿ ಎದುರಿಸಲಾಗದೆ ಇರುವ ಬಿಜೆಪಿ ಪಕ್ಷದ ನೈತಿಕ ಮತ್ತು ಸೈದ್ಧಾಂತಿಕ ದಿವಾಳಿತನವನ್ನು ತೋರುತ್ತದೆ ಮಾತ್ರವಲ್ಲ, ಅವರೊಳಗೆ ಅಡಗಿರುವ ಕೊಲೆಗಡುಕ ಮನಸ್ಥಿತಿಯನ್ನು ಕೂಡಾ ಸೂಚಿಸುತ್ತದೆ.ದೇಶದ ಏಕತೆ ಮತ್ತು ಸಮಗ್ರತೆಗಾಗಿ ಪ್ರಾಣವನ್ನೇ ಬಲಿದಾನ ಮಾಡಿದ ಇಬ್ಬರು ಮಾಜಿ ಪ್ರಧಾನಿಗಳ ಕುಟುಂಬದಿಂದ ಬಂದಿರುವ ರಾಹುಲ್ ಗಾಂಧಿಯವರಿಗೆ ಕೊಲೆ ಬೆದರಿಕೆ ಹೊಸದೇನಲ್ಲ. ಇದರಿಂದ ಅವರು ಹೆದರುವುದೂ ಇಲ್ಲ. ‘‘ಭಯ ಪಡಬೇಡಿ’’ ‘‘ಡರೋ ಮತ್’’ ಎನ್ನುವುದೇ ಅವರ ಮಂತ್ರವಾಗಿದೆ ಎಂದು ಹೇಳಿದರು.
ಕೊಲೆ ಬೆದರಿಕೆ ಹೊರತಾಗಿಯೂ ಹಿಂದಿನ ಕೇಂದ್ರದ ಬಿಜೆಪಿ ಸರ್ಕಾರ ಅವರ ಭದ್ರತಾ ವ್ಯವಸ್ಥೆಯನ್ನು ಸಡಿಲಗೊಳಿಸಲಾಗಿತ್ತು. ಇದರಿಂದ ರಾಹುಲ್ ಗಾಂಧಿಯವರು ಬೆದರಲಿಲ್ಲ. ಇಂತಹ ಬೆದರಿಕೆಗಳ ಹೊರತಾಗಿಯೂ ಸಾಮಾನ್ಯ ಜನರನ್ನು ಭೇಟಿಮಾಡುವುದನ್ನು ನಿಲ್ಲಿಸಿಲ್ಲ.ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಹಿನ್ನಡೆಯಾದ ನಂತರ ರಾಹುಲ್ ಗಾಂಧಿಯವರಿಗೆ ಕೊಲೆ ಬೆದರಿಕೆ ಹೆಚ್ಚಾಗಿದೆ. ದೇಶದಲ್ಲಿ ಸಂಸತ್ ನ ಒಳಗೆ ಮತ್ತು ಹೊರಗೆ ಮಾತ್ರವಲ್ಲ ವಿದೇಶಗಳಲ್ಲಿ ಕೂಡಾ ಅವರ ಮಾತುಗಳನ್ನು ಜಾಗತಿಕ ನಾಯಕರು ಗಂಭೀರವಾಗಿ ಸ್ವೀಕರಿಸುತ್ತಿರುವುದು ಬಿಜೆಪಿ ಮತ್ತು ನರೇಂದ್ರ ಮೋದಿ ಅವರನ್ನು ತಲ್ಲಣಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಂದ ಕೊಲೆ ಬೆದರಿಕೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಿಡಿ ಕಾರಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.