ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ

ಒಟ್ಟು ಏಳು ಸಿಲಿಂಡರ್‌ಗಳನ್ನು ವಶಕ್ಕೆ ಪಡೆದು ಅವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿರುತ್ತಾರೆ.

Written by - Manjunath N | Last Updated : Sep 4, 2024, 08:25 PM IST
  • ಅಂಗಡಿಗಳಿಗೆ ಆಹಾರ ಸುರಕ್ಷತಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು ದಿನಾಂಕ ನಮೂದಾಗಿರದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದಿರುತ್ತಾರೆ
  • ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿರುತ್ತಾರೆ
 ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ title=

ಶಿವಮೊಗ್ಗ: ಆಹಾರ ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಗಳು ಜಂಟಿಯಾಗಿ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ದಾಳಿ ನಡೆಸಿ ಪಟ್ಟಣ ಸಾಮಗ್ರಿ ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ದಂಡ ವಿಧಿಸಿರುತ್ತಾರೆ.

ಆಹಾರ ಸುರಕ್ಷತೆ ಮತ್ತು ಕಲಬೆರಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳ ನಿರ್ದೇಶನದ ಅನ್ವಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪಟ್ಟಣ ಸಾಮಗ್ರಿ ನಿಯಮ ಉಲ್ಲಂಘನೆ ಪ್ರಕರಣದಡಿ ಕೆಎಸ್‌ಆರ್‌ಟಿಸಿ ನಿಲ್ದಾಣದ ಸ್ವಾತಿ ಎಂಟರ್ಪ್ರೈಸಸ್ ಇವರಿಗೆ ರೂ.10,000/- ಮತ್ತು ಹಾಟ್‌ಸ್ಪಾಟ್ ಕೆಫೆ ಹಾಗೂ ರೈಲ್ವೆ ನಿಲ್ದಾಣದಲ್ಲಿನ ಕಾಫಿ ಶಾಪ್ ಇವರಿಗೆ ತಲಾ ರೂ.5000/- ಗಳ ದಂಡವನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ವಿಧಿಸಿರುತ್ತಾರೆ.

ಇದನ್ನೂ ಓದಿ: ಸಾಧಿಸುವ ಕನಸ್ಸು ಹೊತ್ತು ಬಂದಿದ್ದ ಯುವಕನಿಗೆ RCB ತಂಡದಲಿ ಸಿಕ್ಕಿತ್ತು ಅವಕಾಶ: ಬಡ ಕುಟುಂಬದ ಬಂದ ಈತ ಇಂದು ಬೆಂಗಳೂರು ತಂಡದ ಸ್ಟಾರ್‌ ಆಟಗಾರ

ಮತ್ತು ಗೃಹಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡುತ್ತಿದ್ದ ಮೂರು ಹೋಟೆಲ್ ಗಳಿಂದ ಒಟ್ಟು ಏಳು ಸಿಲಿಂಡರ್‌ಗಳನ್ನು ವಶಕ್ಕೆ ಪಡೆದು ಅವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿರುತ್ತಾರೆ.

ತಯಾರಿ ದಿನಾಂಕ ಮತ್ತು ಎಕ್ಸ್ಪೈರಿ ದಿನಾಂಕ ಇಲ್ಲದ ಆಹಾರ ಪದಾರ್ಥಗಳನ್ನು ಮಾರುತ್ತಿದ್ದ ಅಂಗಡಿಗಳಿಗೆ ಆಹಾರ ಸುರಕ್ಷತಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು ದಿನಾಂಕ ನಮೂದಾಗಿರದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದಿರುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News