ಮತ್ತೆ ಪಿಎಫ್ಐ ಮುಖಂಡರ ಮನೆಗಳ ಮೇಲೆ ದಾಳಿ:  ಮಂಗಳೂರಿನಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಇಂಡಿಯಾ- ಪಿಎಫ್ಐ ಸಂಘಟನೆಯ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆದಿದೆ. ಈ ಸಮಯದಲ್ಲಿ ಕೆಲವು ಪಿಎಫ್‌ಐ ಮುಖಂಡರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.  


COMMERCIAL BREAK
SCROLL TO CONTINUE READING

ಮಂಗಳೂರು ಪೊಲೀಸರು ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐ ಸಂಘಟನೆ ಹಾಗೂ ಎಸ್ ಡಿಪಿಐ ಸಂಘಟನೆಯ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು ಪಿಎಫ್​​ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 


ಇದನ್ನೂ ಓದಿ- PFI ಜೊತೆ ಪೊಲೀಸರ ನಂಟು.? ರಾಜ್ಯದ‌ ಮೇಲೂ NIA ಕಣ್ಣು.!


ಎಸ್ ಡಿಪಿಐ ಜಿಲ್ಲಾಧ್ಯಕ್ಷರ ಮನೆಗೆ ಪೊಲೀಸ್ ದಾಳಿ:
ಇಂದು ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ ಕೂಡ ನಡೆಸಲಾಗಿದೆ. ಅಬೂಬಕರ್ ಕುಳಾಯಿಯವ್ರನ್ನು ಬಂಧಿಸಲು ಪೊಲೀಸರು ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಳಿಯ ವೇಳೆ  ಅಬೂಬಕರ್ ಕುಳಾಯಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. 


ಇದನ್ನೂ ಓದಿ- CFI ಮೇಲೆ ದಾಳಿ ವೇಳೆ ಸಿಕ್ಕಿದೆ ಯುವ ಸಮೂಹವನ್ನು ಬ್ರೈನ್ ವಾಶ್ ಮಾಡುವ ನರಮೇಧದ ಪತ್ರ


ಪಣಂಬೂರು, ಸುರತ್ಕಲ್, ಮಂಗಳೂರು ಗ್ರಾಮಾಂತರ, ಉಳ್ಳಾಲ ಸೇರಿ ಏಳೆಂಟು ಕಡೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರ ಸ್ಥಳಗಳ ಮೇಲೆ ದಾಳಿ ಮಾಡಿರುವ ಪೊಲೀಸರು ಮನೆಗಳ ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಪಿಎಫ್​​ಐ ಮುಖಂಡರನ್ನು ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.