Karnataka Weather Forecast: ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಉಂಟಾಗಿರುವ ಚಂಡಮಾರುತ ಮತ್ತು ಅರಬ್ಬಿ ಸುಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ಅಕ್ಟೋಬರ್‌ 15 ರಿಂದ ಅ.17ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 


COMMERCIAL BREAK
SCROLL TO CONTINUE READING

ಅ.17ರ ಬೆಳಗ್ಗೆಯಿಂದ ಅ.18ರವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 


ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮುಗಿಬಿದ್ದ ಕಮಲ ಕಲಿಗಳು


ಇದಲ್ಲದೆ ಅ.15ರಿಂದ ಅ.17ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.   


ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅ.17ರಿಂದ ಅ.18ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಸಹ ಅ.17ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಅದ್ಧೂರಿ ಸ್ವಾಗತ


ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.