Karnataka Weather: ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.


COMMERCIAL BREAK
SCROLL TO CONTINUE READING

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತವು ತಮಿಳುನಾಡು ಮತ್ತು ಪುದುಚೆರಿಯ ಕಡೆಗೆ ಸಾಗಿದ ಪರಿಣಾಮ, ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 


ಇದನ್ನೂ ಓದಿ: ಫೆಂಗಲ್‌ ಚಂಡಮಾರುತ ಅಬ್ಬರ.. 134 ಪ್ರದೇಶಗಳು ಜಲಾವೃತ, ಚೆನ್ನೈನಲ್ಲಿ ರೆಡ್‌ ಅಲರ್ಟ್!


ಈ ಪ್ರದೇಶಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು ಅಂತಾ ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ. ಈ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೇವಾಂಶದ ಪ್ರಮಾಣ ಕಡಿಮೆಯಾಗಿರುವುದರಿಂದ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. 


ದಕ್ಷಿಣ ಒಳನಾಡಿನ ಇನ್ನಿತರೆ ಭಾಗಗಳಲ್ಲಿ ಸಹ ಒಣ ಹವಾಮಾನದ ಅನುಭವವಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ವಿಶೇಷವಾಗಿ ವಿಜಯಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ, ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರಬಹುದು. 


ಇದನ್ನೂ ಓದಿ: ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್


ರಾತ್ರಿ ಮತ್ತು ಬೆಳಗಿನ ವೇಳೆಯಲ್ಲಿ ಹೆಚ್ಚಿನ ಚಳಿ ಅನುಭವವಾಗಲಿದ್ದು ನಂತರದ ದಿನದಲ್ಲಿ ಒಣಹವೆ ಪ್ರಾಬಲ್ಯ ಹೊಂದಲಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಎನ್.ಪುವಿಯರಸನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.