ಬೆಂಗಳೂರು : ರಾಜ್ಯದಲ್ಲಿ ವರುಣ ಆರ್ಭಟ ಮುಂದುವರೆಯಲಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಇದು ಇನ್ನು ಕೆಲ ದಿನಗಳವರೆಗೆ ಹೀಗೆಯೇ ಮುಂದುವರಿಯಲಿದೆ. ಅದರಲ್ಲೂ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಈ ಬಾರಿ ರಾಜ್ಯದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಎಲ್ಲಿ ನೋಡಿದರೂ ಮಳೆ, ಮಳೆ ನೀರು. ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು. ಹಳ್ಳ ಕೊಳ್ಳ, ನದಿ ತುಂಬಿ ಹರಿದು ನಗರಗಳತ್ತ ನೀರು ಹರಿದು ಬರುತ್ತಿದೆ. ರಾಜ್ಯದ ಬಹುತೇಕ ಎಲ್ಲಾ ಜಲಾಶಯಗಳು ಕೂಡಾ ತುಂಬಿವೆ . ಜಲಾಶಯದಿಂದ ಹೊರ ಬಿಡುತ್ತಿರುವ ನೀರು ಹೊಲಗಳಿಗೆ ನುಗ್ಗಿ ಬೆಳೆ ನಾಶವಾಗಿದೆ.
ಇದನ್ನೂ ಓದಿ : ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಬಿಎಂಟಿಸಿ ಸಿದ್ಧತೆ
ಈ ನಡುವೆ ರಾಜ್ಯದಲ್ಲಿ ಇನ್ನೂ ಕೂಡಾ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಲ್ಲೂ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇನ್ನು ಕರಾವಳಿ ಭಾಗದಲ್ಲಿ ಬಿರುಗಾಳಿ 60 km ವೇಗ ತಲುಪುವ ಸಾಧ್ಯತೆ ಎಂದು ಹೇಳಲಾಗಿದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯುದ್ದಕ್ಕೂ ಇಂದು ರಾತ್ರಿವರೆಗೆ 3.5 – 4.7 ಮೀಟರ್ ಎತ್ತರದ ಅಲೆಗಳು ಏಳಲಿವೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಭಾರೀ
ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯ ರಾಜಧಾನಿಯಲ್ಲಿ ಎರಡು ದಿನ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಹಗುರದಿಂದ ಸಾಧಾರಣ ಮಳೆ ಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ : ಮೊಹರಂ ಹಬ್ಬದಲ್ಲೂ ‘ಕರುನಾಡ ಯುವರತ್ನ’: ರಾರಾಜಿಸಿತು ಪುನೀತ್ ರಾಜ್ ಕುಮಾರ್ ಫೋಟೋ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.