ಬೆಂಗಳೂರು: ಇಂದು ಮತ್ತು ನಾಳೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.


COMMERCIAL BREAK
SCROLL TO CONTINUE READING

ನವೆಂಬರ್ 12ರವರೆಗೂ ಅತಿಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರದಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ​


ಇದನ್ನೂ ಓದಿ: “ಕೆ ಎಸ್ ಈಶ್ವರಪ್ಪನವರಿಗೆ ಬಿಜೆಪಿಯಲ್ಲಿ ಬೆಲೆ ಇಲ್ಲ”


ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳದಲ್ಲಿ ಮಳೆಯಾಗಲಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಹಾಗೂ ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ.


ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಹಲವು ಕಡೆ  ಹಗುರದಿಂದ ಸಾಧಾರಣ ಮಳೆಯಾಗಲಿದೆಯಂತೆ. ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಇದನ್ನೂ ಓದಿ: ಬಿಜೆಪಿ ಸಂಪರ್ಕದಲ್ಲಿ ಕಾಂಗ್ರೆಸ್‌ನ 45 ಶಾಸಕರು


ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.