Bengaluru Rains: ಸುಡುಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಹವಾಮಾನ ಇಲಾಖೆ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಮಾರ್ಚ್ 16, 17ರಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ನಿನ್ನೆಯಿಂದ(ಮಾರ್ಚ್ 15) ರಾಜ್ಯದ ಕೆಲವೆಡೆ ವರುಣ ತಂಪೆರೆದಿದ್ದು ಮುಂದಿನ 48ಗಂಟೆಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇದಲ್ಲದೆ, ಮುಂದಿನ ನಾಲ್ಕು ದಿನಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಮುಂದಿನ ನಾಲ್ಕೈದು ದಿನಗಳಲ್ಲಿ ಬೆಂಗಳೂರಿನ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- ಸಚಿವ ವಿ. ಸೋಮಣ್ಣ ಮುನಿಸಿಗೆ ಚಾಮರಾಜನಗರ ಸಾರಥ್ಯದ ಮುಲಾಮು ಹಚ್ಚಿದ ಹೈಕಮಾಂಡ್!
ಇಂದು (ಮಾರ್ಚ್ 16) ಮತ್ತು ನಾಳೆ (ಮಾರ್ಚ್ 17) ಬೆಂಗಳೂರಿನ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು- ಮಿಂಚಿನಿಂದ ಕೂಡಿದ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಇಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ.
ಇದನ್ನೂ ಓದಿ- ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್
ಐಎಂಡಿ ಮುನ್ಸೂಚನೆಯ ಪ್ರಕಾರ , ಉತ್ತರ-ಒಳನಾಡಿನಾದ್ಯಂತ ಗುಡುಗು ಸಹಿತ ಚಂಡಮಾರುತದ ಚಟುವಟಿಕೆಗಳು ಭಾನುವಾರದವರೆಗೆ ಮುಂದುವರಿಯುತ್ತದೆ. ಆದರೆ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು ಮತ್ತು ದಕ್ಷಿಣ-ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.