ಜೋರು ಮಳೆಗೆ ಕೊಚ್ಚಿಹೋದ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ
ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಕೊಚ್ಚಿಹೋದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು, ಕುಲಗಾಣ, ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.
ಚಾಮರಾಜನಗರ : ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದ ಹಿನ್ನೆಲೆ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೊಚ್ಚಿಹೋದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು, ಕುಲಗಾಣ, ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.
ಹಿರೇಬೇಗೂರಿನ ಚೇರ್ಮನ್ ಮಧು, ರಾಜೇಶ್ ಸೇರಿದಂತೆ ಹತ್ತಾರು ರೈತರು ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಮಳೆ ಆರ್ಭಟಕ್ಕೆ ಕೊಚ್ಚಿ ಹೋಗಿದ್ದು ಮತ್ತೊಮ್ಮೆ ಬಿತ್ತನೆ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: ತಡರಾತ್ರಿ ದೇವರಾಜೇಗೌಡನನ್ನು SIT ಕಚೇರಿಗೆ ಕರೆತಂದ ಅಧಿಕಾರಿಗಳು
ಹಿರೇಬೇಗೂರಲ್ಲಿ ಟೊಮೊಟೊ ಪೈರು ಕೂಡ ಕೊಚ್ಚಿ ಹೋಗಿದ್ದು ವೀರಭದ್ರಪ್ಪ 1 ಎಕರೆಗೆ ಹಾಕಿದ್ದ ಟೊಮ್ಯಾಟೊ ಪೈರು ಮಳೆ ಪಾಲಾಗಿದೆ. ಚೇರ್ಮನ್ ಮಧು ಅವರು 8 ಬ್ಯಾಗ್ ಸೂರ್ಯಕಾಂತಿ ಬಿತ್ತಿದ್ದರು ಈಗ ಎಲ್ಲವೂ ಕೊಚ್ಚಿಹೋಗಿದ್ದು ಸೂಕ್ತ ಪರಿಹಾರ ಕೊಡಬೇಕೆಂದು ಆಗ್ರಹಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.