ಚಾಮರಾಜನಗರ: ಚಾಮರಾಜನಗರದಲ್ಲಿ ಮಳೆ ಅವಾಂತರ ಮುಂದುವರೆದಿದ್ದು ಮನೆಗೋಡೆ ಕುಸಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ದಡದಹಳ್ಳಿ ಗ್ರಾಮದ ಮೂರ್ತಿ(32) ಮೃತ ದುರ್ದೈವಿ.  ಮಲಗಿದ್ದ ವೇಳೆ ನಿರಂತರ ಮಳೆಯಿಂದಾಗಿ ಮನೆಗೋಡೆ ತಲೆಯ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೂರ್ತಿ ಮೃತಪಟ್ಡಿದ್ದಾರೆ‌. ಚಾಮರಾಜನಗರ ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರವಾನಿಸಲಾಗಿದೆ. 


ಇದನ್ನೂ ಓದಿ- Heavy rain in Karnataka : ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮಾಹಿತಿ


ಬೂದಿಪಡಗ ಸೇತುವೆ ಮುಳುಗಡೆ: 
ಗಡಿ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಗೆ ಚಾಮರಾಜನಗರ ತಾಲೂಕಿನ ಬೂದಿಪಡಗ ಸೇತುವೆ ಮುಳುಗಡೆಯಾಗಿ ಸೇತುವೆ ಮೇಲೆ 3 ಅಡಿ ನೀರು ನೀರು ಹರಿಯುತ್ತಿದ್ದು ಸಂಚಾರ ಸಂಪೂರ್ಣ ಬಂದ್ ಆಗಿದೆ. ಮೊದಲೇ ಮಳೆ ಆರ್ಭಟಕ್ಕೆ ಪಾರ್ಶ್ವವಾಗಿ ಕುಸಿತ ಕಂಡಿದ್ದ ಸೇತುವೆ ಮುಳುಗಡೆ ಆಗಿರುವುದರಿಂದ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಜೊತೆಗೆ, ಸೇತುವೆ ಮೇಲೆ ವಿದ್ಯುತ್ ಕಂಬ ಕೂಡ ಬಿದ್ದಿದ್ದು ಜನರು ಸೇತುವೆ ಬಳಿ ಸುಳಿಯದೇ ಆತಂಕದಲ್ಲಿದ್ದಾರೆ‌.


[[{"fid":"256001","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಗ್ರಾಮದಲ್ಲಿ ಕಿತ್ತೂರು ಚೆನ್ನಮ್ಮ, ಆಶ್ರಮ ಶಾಲೆಗಳ ಶಿಕ್ಷಕರು, ಕೂಲಿ ಕಾರ್ಮಿಕರು ಸೇತುವೆ ದಾಟಲಾಗದೇ ಪರದಾಡುತ್ತಿದ್ದಾರೆ.


ಇದನ್ನೂ ಓದಿ- ಲಿಂಬಾವಳಿ ಹೆಣ್ಮಕ್ಕಳ ಮೇಲೆ ರೇಪ್‌ ಮಾಡಲ್ಲ, ಅವರ ನಡವಳಿಕೆಯೇ ಬೇರೆ : ಹೆಚ್‌ಡಿಕೆ


ಕೆರೆಯಂತಾದ ಬೇಗೂರು ಠಾಣೆ: 


[[{"fid":"256002","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]
ನಿರಂತರವಾಗಿ ರಾತ್ರಿ ಸುರಿದ ಮಳೆ ಪರಿಣಾಮ ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣೆ ಕೆರೆಯಂತಾಗಿದ್ದು ಪೊಲೀಸ್ ವಾಹನಗಳು ಕೆರೆಯಲ್ಲಿ ನಿಂತತ್ತೇ ಕಾಣುತ್ತಿದೆ.  ರಾಷ್ಟ್ರೀಯ ಹೆದ್ದಾರಿ ಮೇಲೆಲ್ಲಾ ನೀರು ಹರಿಯುತ್ತಿದ್ದು ಸಂಚಾರ ಅಸ್ತವ್ಯಸ್ತವಾಗಿದೆ, ಠಾಣೆ ಆವರಣ ಜಲಾವೃತವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.