ಹುಬ್ಬಳ್ಳಿ :  ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಬೀಸಿದ ಗಾಳಿ ಮಳೆಯಿಂದಾಗಿ ಅನೇಕ ಕಡೆ ಅನಾಹುತ ಸಂಭವಿಸಿದೆ. ಹುಬ್ಬಳ್ಳಿಯಲ್ಲಿ ನಿನ್ನೆ ಸುರಿದ ಭಾರೀ ಮಳೆ ಗಾಳಿ ಕೂಡಾ ಬಹಳ ಆವಾಂತರವನ್ನೇ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಬೀಸಿದ ಗಾಳಿ ಮಳೆಗೆ ವಿದ್ಯಾರ್ಥಿಗಳು ಸಿಲುಕಿ ಪರದಾಡಿದ ಘಟನೆ ನಡೆದಿದೆ.  


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ನಿನ್ನೆ ಭಾರೀ ಗಾಳಿ ಸಹಿತ ಮಳೆಯಾಗಿದೆ. ಈ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿನಿಯರು ಬಿರುಗಾಳಿಯ ಹೊಡೆತಕ್ಕೆ ಸಿಲುಕಿ ಪರದಾಡಿದ್ದಾರೆ. ಈ ರೀತಿ ವಿದ್ಯಾರ್ಥಿಗಳು ಗಾಳಿ ಮಳೆಗೆ ಸಿಲುಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 


 


ಇದನ್ನೂ ಓದಿ : Vegetable price: ಅಕಾಲಿಕ ಮಳೆ ಎಫೆಕ್ಟ್‌.. ಗಗನಕ್ಕೇರಿದ ತರಕಾರಿ ಬೆಲೆ


ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿನಿಯರು ಸ್ಕೂಟಿಯಲ್ಲಿ ಬರುತ್ತಿದ್ದರು. ‌ಈ ವೇಳೆ ನೋಡು ನೋಡುತ್ತಿದ್ದಂತೆ ಜೋರಾಗಿ ಗಾಳಿ ಬೀಸಿದೆ. ಈ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಸಮೇತ ಕೆಳಗೆ ಬಿದ್ದಿದ್ದಾರೆ. ವಿದ್ಯಾರ್ಥಿಗಳು ಕೆಳಗೆ ಬೀಳುತ್ತಿರುವುದು ಮತ್ತು ಸ್ಕೂಟಿ ಕೂಡಾ ಗಾಳಿಯ ರಭಸಕ್ಕೆ ಸಿಲುಕಿ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.  


Viral Video: ರಸ್ತೆಮಧ್ಯೆ ಕೆಟ್ಟು ನಿಂತ ಪೊಲೀಸ್ ವ್ಯಾನ್..‌ ಸಾರ್ವಜನಿಕರಿಂದ ತಳ್ಳು-ಐಸಾ ತಳ್ಳು-ಐಸಾ!!


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.