ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.

Last Updated : Mar 30, 2018, 09:23 PM IST
ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಹೀಗಾಗಿ ಜನಜೀವನ ಅಸ್ಥವ್ಯಸ್ಥವಾಗಿದೆ. 

ಬೆಂಗಳೂರಿನ ಕೆ.ಆರ್.ಪುರಂ, ಮಲ್ಲೇಶ್ವರಂ, ಯಶವಂತಪುರ ಸೋಪ್ ಫ್ಯಾಕ್ಟರಿ, ದಾಸರಹಳ್ಳಿ, ನೆಲೆಮಂಗಲ ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಹಲವು ಮರಗಳು ಧರೆಗುರುಳಿವೆ. 

ಉಳಿದಂತೆ ಚಿಕ್ಕಮಗಳೂರು, ದೊಡ್ಡಬಳ್ಳಾಪುರ, ದಾಬಸ್ ಪೇಟೆ, ಚಿಕ್ಕಬಳ್ಳಾಪುರ, ಹಾಸನ ಜೆಲ್ಲೆಗಳು ಸೇರಿದಂತೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ, ಗಾಳಿಯೂ ಬಹಳ ಜೋರಾಗಿ ಬೀಸುತ್ತಿದ್ದು, ಹಲವು ಮರಗಳು ಧರೆಗುರುಳುವ ಸಾಧ್ಯತೆ ಕಂಡುಬಂದಿದೆ. ಇದರಿಂದ ಜನತೆ ಬಹಳ ಆತಂಕಕ್ಕೆ ಒಳಗಾಗಿದ್ದಾರೆ.

ಹಸುಗಳು ಸಾವು : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ಸಿಡಿಲ ಬಡಿತಕ್ಕೆ ಮೂಡಲ ಗಿರೀಗೌಡ ಎಂಬುವರಿಗೆ ಸೇರಿದ ಸುಮಾರು 1 ಲಕ್ಷ ರೂ ಬೆಲೆ ಬಾಳುವ 2ಹಸುಗಳು ಮೃತಪಟ್ಟಿವೆ. ಜೀವನಾಧಾರವಾಗಿದ್ದ ಹಸುಗಳನ್ನ ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ. 

ದ್ರಾಕ್ಷಿ ತೋಟ ಹಾನಿ : ಚಿಕ್ಕಬಳ್ಳಾಪುರ ತಾಲೂಕಿನ ಗಿಡ್ನಹಳ್ಳಿ, ತಾಳಹಳ್ಳಿ ಸೇರಿ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ ತೋಟಗಳು ಹಾನಿಗೊಳಗಾಗಿವೆ. ಇದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧೆಡೆ ನಾಳೆಯೂ ಕೊಂಚ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Trending News