ಬೆಂಗಳೂರು: ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏ.21 ರಿಂದ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಶಿವಮೊಗ್ಗ, ಹುಬ್ಬಳ್ಳಿ, ಗದಗ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಸುರಿದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. 


COMMERCIAL BREAK
SCROLL TO CONTINUE READING

ಬೆಂಗಳೂರು ನಗರದಲ್ಲಿ ನಿನ್ನೆ ರಾತ್ರಿ ವರುಣನ ಸಿಂಚನದಿಂದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ಕೊಂಚ ತಂಪೆರದಂತಾಗಿದೆ. ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ನಿನ್ನೆ ಸಂಜೆ 7 ಗಂಟೆಯ ನಂತರ ಸಿಲಿಕಾನ್‌ ಸಿಟಿಯ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಟೌನ್ ಹಾಲ್, ಶಾಂತಿನಗರ, ಬಸವನಗುಡಿ, ಜಯನಗರ, ಬ್ಯಾಟರಾಯನಪುರ, ಯಲಹಂಕ, ಹೆಬ್ಬಾಳ, ಕೆಆರ್ ಮಾರ್ಕೆಟ್​, ಗಿರಿನಗರ, ಸುತ್ತಮುತ್ತ ಮಳೆ ಸುರಿದಿದೆ.  


ಇದನ್ನೂ ಓದಿ: ಕನ್ನಡದ ಹಿರಿಯ ಸಾಹಿತಿ ಶ್ರೀನಿವಾಸ್ ವೈದ್ಯ ಇನ್ನಿಲ್ಲ


ಏ.21 ರಿಂದ ಏ.25ರವರೆಗೆ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಏ.21 ಮತ್ತು 22 ರಂದು ಉಡುಪಿ ಜಿಲ್ಲೆಯಲ್ಲಿ, ಉತ್ತರ ಒಳನಾಡಿನ ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಏ.21ರಂದು ಏ.25ರವರೆಗೆ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಬಳ್ಳಾರಿ, ಕೊಡಗು, ಚಿಕ್ಕಮಗಳೂರು, ಕೋಲಾರ, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


ಇದನ್ನೂ ಓದಿ: ದರ್ಶನ್ ಪುಟ್ಟಣ್ಣಯ್ಯ ಬೆಂಬಲಕ್ಕೆ ನಿಂತ ನಟ ದರ್ಶನ್‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.