ಬೆಂಗಳೂರು: ರಾಜ್ಯದಲ್ಲಿ ಇಂದು ಸೇರಿದಂತೆ 4 ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಅತಿಯಾದ ಮಳೆಯ ಸಂಭವವಿದ್ದು, ರಾಜಧಾನಿ ಬೆಂಗಳೂರಲ್ಲೂ ವರುಣಾರ್ಭಟಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಈಗಾಗಲೇ ರಾಜ್ಯದಲ್ಲಿ ಪೂರ್ವ ಮಾನ್ಸೂನ್ ಚುರುಕಾಗಿದ್ದು ಬೆಂಗಳೂರು ಸೇರಿದಂತೆ ಹಲವು‌ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಇದೀಗ ಮತ್ತೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಅವಧಿ ಮುಂದುವರೆಯುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಪ್ರಮುಖವಾಗಿ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿಯೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ರಾಜಧಾನಿ ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಎಚ್ಚರಿಕೆ ನೀಡಿದೆ ಭಾರತೀಯ ಹವಾಮಾನ ಇಲಾಖೆ. ಮಳೆ ಜೊತೆಗೆ ಗಂಟೆಗೆ 30-40 kmph ವೇಗದಲ್ಲಿ ಗಾಳಿ ಬೀಸುವ ಸಂಭವವಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ.


ಇದನ್ನೂ ಓದಿ: ‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’


17 ರಿಂದ 21ರ ವರೆಗೆ ಹವಾಮಾನ ಇಲಾಖೆ ಪರಿಣಾಮಕಾರಿ ರೀತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಪೈಕಿ ಬೆಂಗಳೂರಿನಲ್ಲಿ  ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಇದ್ದು 20 ಮತ್ತು 21ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕದ್ದುಮುಚ್ಚಿ ಥಿಯೇಟರ್‌ಗೆ ಬಂದು ‘ಕೆಜಿಎಫ್-2’ ನೋಡಿದ್ರಾ ನಟಿ ಸಾಯಿ ಪಲ್ಲವಿ..?


ಹವಾಮಾನ ಇಲಾಖೆ ನೀಡಿರುವ ಮಾನ್ಸೂನ್ ಪೂರ್ವ ಮಳೆಯ ಎಚ್ಚರಿಕೆಯಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಹಿರಿಯ ಅಧಿಕಾರಿಗಳು ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈಗಾಗಲೇ ಮಾನ್ಸೂನ್ ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಚುರುಕು ಮಾಡಿರುವ ಬಿಬಿಎಂಪಿ  SWD ಹಾಗೂ ರಾಜಕಾಲುವೆ ಹೂಳೇತ್ತುವ ಕೆಲಸಕ್ಕೆ ವೇಗ ನೀಡಿದ್ದಾರೆ. ಜೊತೆಗೆ ಮಳೆ ಬಂದು ರಸ್ತೆ ಮೇಲೆ ನಿಲ್ಲುವ ನೀರಿಗೂ ಪರಿಹಾರ ಕಂಡುಹಿಡಿದ್ದಾರೆ. ಈಗಾಗಲೇ ಅತಿ ಹೆಚ್ಚು ಮಳೆ ನೀರು ನಿಲ್ಲುವ ರಸ್ತೆಗಳನ್ನು ಗುರುತು ಮಾಡಿದ್ದು, ಓರ್ವ ಸಿಬ್ಬಂದಿಯನ್ನು ಸ್ಥಳದಲ್ಲೇ ನಿಯೋಜಿಸಿ ಮಳೆ ನೀರಿನ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.


ಒಟ್ಟಾರೆ ಮಾನ್ಸೂನ್ ಪೂರ್ವ ಮಳೆಯ ಎಚ್ಚರಿಕೆ ಸಿಕ್ಕಿದ್ದು, ಮಳೆಯಿಂದ ಭೀತಿಗೊಳಗಾಗಿರುವ ಬೆಂಗಳೂರಿಗೆ ಮತ್ತಷ್ಟು ಆತಂಕ ಹೆಚ್ಚಿದೆ‌. ಈಗಾಗಲೇ ಮಳೆ ಅವಾಂತರಕ್ಕೆ ತತ್ತರಿಸುವ ಬೆಂಗಳೂರಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.