ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ ಇನ್ನೆರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ಇಂದು ಕರಾವಳಿಯ ಹಲವು ಕಡೆ ಹಾಗು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ, ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಇದನ್ನು ಓದಿ: Trigrahi Yog: ಮೀನ ರಾಶಿಯಲ್ಲಿ ‘ತ್ರಿಗ್ರಾಹಿ ಯೋಗ’, ಈ 3 ರಾಶಿಯವರ ಜೀವನದಲ್ಲಿ ಪ್ರಗತಿ


ರಾಜ್ಯದಲ್ಲಿ ಅತೀ ಹೆಚ್ಚಿನ ಉಷ್ಣಾಂಶ ಬೀದರ್ 35. ಡಿಗ್ರಿ ಸೆ, ದಾಖಲಾಗಿದೆ.ಮುಂದಿನ ಎರಡು ದಿನ ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.


ಹಲವು ಜಿಲ್ಲೆಗಳಿಗೆ ವರುಣಾರ್ಭಟ


ಕರಾವಳಿಯ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ,  ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು  ತುಮಕೂರು ಜಿಲ್ಲೆ ಭಾಗದಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹೇಳಲಾಗಿದೆ.


ಇದನ್ನೂ ಓದಿ: ಅಬ್ಬಬ್ಬಾ...ಡ್ರಗ್‌ ದಂಧೆಕೋರರಿಂದ ವಶಕ್ಕೆ ಪಡೆದ ಹೆರಾಯಿನ್‌ ಮೌಲ್ಯ ಎಷ್ಟು ಗೊತ್ತಾ!


ಮೀನುಗಾರರಿಗೆ ಎಚ್ಚರಿಕೆ  


ಮುಂದಿನ 24 ಘಂಟೆಗಳಲ್ಲಿ ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಪ್ರತಿ ಘಂಟೆಗೆ 40-50 ಕಿ.ಮೀ ಇರುವ ಸಾಧ್ಯತೆಯಿದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದೆ.


ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ


ಮುಂದಿನ ಒಂದೆರಡು ದಿನ ರಾಜಧಾನಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಮಳೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆಯಿದೆ.ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.