ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ(ಏ.25) ಭಾರೀ ಬೇಸಿಗೆ ಮಳೆ ಸುರಿದಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಸಿಡಿಲಿಗೆ ​ಐವರು ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು & ಉಡುಪಿ ಜಿಲ್ಲೆಗಳ ಕೆಲಭಾಗಗಳಲ್ಲಿ ಉತ್ತಮ ಮಳೆಯಾಗಿದೆ.  


COMMERCIAL BREAK
SCROLL TO CONTINUE READING

ಇನ್ನೂ 2 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ. ಏ.27ರಂದು ಕರಾವಳಿ ಹಾಗೂ ಉತ್ತರ ಒಳನಾಡಿಗೆ ಮಳೆ ಹಾಗೂ ಗುಡುಗಿನ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಿಗೂ ಮಳೆ ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ: Basanagouda Patil Yatnal : ಸಿಎಂ ಮುಂದೆ ದರಿದ್ರ ಭಾಗ್ಯಗಳು ಬೇಡ ಎಂದ ಶಾಸಕ ಯತ್ನಾಳ್!


ಮೇ 1ರವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹೇಳಲಾಗಿದೆ. ರಾಜ್ಯದ ಹೆಚ್ಚಿನ ಪ್ರದೇಶಗಳಲ್ಲಿ ಮಳೆಗಿಂತ ಗುಡುಗು, ಸಿಡಿಲುಗಳ ಆರ್ಭಟ ಜೋರಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಸಲಹೆ ನೀಡಲಾಗಿದೆ.


ಇಂದು ರಾತ್ರಿ ವೇಳೆ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಬಳ್ಳಾರಿಯಲ್ಲಿ ವೇಗವಾದ ಗಾಳಿಯೊಂದಿಗೆ ಮಳೆಯಾಗಲಿದೆ. ಹಾಗೆಯೇ ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ಗುಡುಗು, ಸಿಡಿಲು ಹಾಗೂ ಗಾಳಿಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ.


ಇದನ್ನೂ ಓದಿ: ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಚಿವರಿಂದ ತರಾಟೆ; ದಲೆದಂಡದ ಎಚ್ಚರಿಕೆ!


ಮಳೆಯ ಜೊತೆಗೆ ಜೋರಾಗಿ ಬೀಸಿದ ಗಾಳಿಯಿಂದ ರಾಜ್ಯದ ಹಲವೆಡೆ ವಿದ್ಯುತ್ ವ್ಯತ್ಯಯವಾಗಿತ್ತು. ಅತಿಯಾದ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪು ನೀಡಿದ್ದರೂ ಮಳೆಯ ಆರ್ಭಟಕ್ಕೆ ಕೆಲವೆಡೆ ಜನರು ತತ್ತರಿಸಿ ಹೋಗಿದ್ದಾರೆ.


ಗುಡುಗು-ಮಿಂಚು ಜೋರಾಗಿರುವುದರಿಂದ ಜನರು ಮನೆಯಿಂದ ಹೊರಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಕಾರಣ ಜನರು ಮುಂಜಾಗೃತೆ ವಹಿಸಬೇಕೆಂದು ಸೂಚಿಸಲಾಗಿದೆ.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.