ಬೆಂಗಳೂರು : ರಾಜ್ಯ ಸರ್ಕಾರ ಮಾರ್ಚ್ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ 'ರೈತ ಸೌರಶಕ್ತಿ ಮೇಳ'ಆಯೋಜಿಸಿದೆ. "ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ಇದೇ ಮಾರ್ಚ್ 9 ರಂದು "ರೈತ ಸೌರ ಶಕ್ತಿ ಮೇಳ” ಆಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
"ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ 'ಕುಸುಮ್ ಬಿ' ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ ಎದ್ನು ಹೇಳಿದ್ದಾರೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಮೇಳ ಅತ್ಯುತ್ತಮ ವೇದಿಕೆಯಾಗಲಿದೆ. ಸೌರ ಪಂಪ್‌ಸೆಟ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ರೈತರು ತಮ್ಮ ಜಮೀನುಗಳಲ್ಲಿ ಇದನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ : #NalinKumarForDakshinaKannada : ಸಂಸದ ನಳಿನ್ ಕುಮಾರ್ ಕಟೀಲ್ ಪರ ಬೃಹತ್ ಅಭಿಯಾನ
ಮಾರ್ಚ್ 9ರ ಸಂಜೆ 4 ಗಂಟೆಗೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಜತೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 'ಕುಸುಮ್ ಸಿ' ಯೋಜನೆ ಹಾಗೂ ರಾಜ್ಯದ 13 ಜಿಲ್ಲೆಗಳಲ್ಲಿರುವ ವಿವಿಧ ವೋಲ್ಟೇಜ್ ವರ್ಗಗಳ ಹೊಸ ಸಬ್‌ಸ್ಟೇಷನ್‌ಗಳಿಗೂ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ.
"ಹೆಚ್ಚಿನ ಪ್ರಮಾಣದಲ್ಲಿ ಸೌರ ಪಂಪ್ ಸೆಟ್ ಅಳವಡಿಕೆಯನ್ನು ರೈತರ ಸಮೂಹಗಳಲ್ಲಿ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಈವರೆಗೆ ನೀಡಲಾಗುತ್ತಿದ್ದ ಶೇ 30 ರಷ್ಟು ಸಹಾಯಧನವನ್ನು ಶೇ 50 ಕ್ಕೆ ಹೆಚ್ಚಿಸಿದೆ. ಒಟ್ಟಾರೆ ಮೊತ್ತದಲ್ಲಿ ಶೇ 20 ರಷ್ಟನ್ನು ಮಾತ್ರ ರೈತರು ಭರಿಸಬೇಕಾಗಿರುತ್ತದೆ. ಇದಲ್ಲದೇ, ಯೋಜನೆಯಡಿ ರೈತರಿಗೆ ಪಂಪ್, ಮೀಟರ್, ಪೈಪ್‌ಗಳನ್ನು ಒದಗಿಸಲಿದೆ,"ಎಂದರು
ಮೇಳದಲ್ಲಿ ಏನಿರುತ್ತದೆ ? :
ರಾಜ್ಯದ ನಾನಾ ಭಾಗಗಳಿಂದ ಬರುವ ರೈತರಿಗೆ ಸೌರ ಪಂಪ್‌ಸೆಟ್‌ಗಳ ಬಗ್ಗೆ ಮಾಹಿತಿ ನೀಡಲು ಮೇಳದಲ್ಲಿ ವ್ಯವಸ್ಥೆ ಮಾಡಲಾಗಿರುತ್ತದೆ. ವಿವಿಧ ಸೌರ ವಿದ್ಯುತ್ ಉತ್ಪನ್ನಗಳ ಮಳಿಗೆಗಳು ಅಲ್ಲಿರಲಿವೆ.
ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಉಳಿತಾಯ: ಡಿ.ಕೆ.ಶಿವಕುಮಾರ್
ಸೌರ ಪಂಪ್‌ಸೆಟ್‌ಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ನೇರವಾಗಿ ನೋಡುವ ಅವಕಾಶ ಇರುತ್ತದೆ.
ಸೋಲಾರ್ ಪಂಪ್‌ಸೆಟ್ ಅಳವಡಿಕೊಳ್ಳುವ ರೈತರಿಗಾಗಿಯೇ ಆನ್‌ಲೈನ್ ಪೋರ್ಟಲ್ ವಿನ್ಯಾಸಗೊಳಿಸಲಾಗಿದೆ. ಅಲ್ಲದೇ, ಮೇಳದಲ್ಲಿ ‘ಸೌರ ಮಿತ್ರ’ ಆ್ಯಪ್ ಬಿಡುಗಡೆ ಮಾಡಲಾಗಿತ್ತದೆ. ಆ್ಯಪ್ ಮೂಲಕವೂ ರೈತರು ಅರ್ಜಿ ಸಲ್ಲಿಸಬಹುದಾಗಿದೆ.
ರೈತರಿಗಾಗಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸೌರ ಪಂಪ್ ಸೆಟ್‌ಗಳ ಉತ್ಪಾದಕರು, ಮಾರಾಟಗಾರರು, ಬ್ಯಾಂಕ್ ಅಧಿಕಾರಿಗಳು, ಕೃಷಿ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳು ಸಂವಾದದಲ್ಲಿ ಪಾಲ್ಗೊಂಡು ರೈತರಿಗೆ ಮಾಹಿತಿ ಒದಗಿಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.