ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ರಾಜಕಾಲುವೆ ಒತ್ತುವರಿ ಮಾಡಿರುವ ಪ್ರದೇಶಗಳ ತೆರವು ಕಾರ್ಯಾಚರಣೆಯು ಇಂದು ಮುನ್ನೆಕೊಳಲು ಗ್ರಾಮದ ಸ್ಪೈಸ್ ಗಾರ್ಡನ್ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಸಿದ್ದು, ಒಟ್ಟು 3 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನಾಳೆಯಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಚಾಲನೆ


ಮುನ್ನೆಕೊಳಲಿನ ಸ್ಪೈಸ್ ಗಾರ್ಡನ್ ಬಳಿ ರಾಜ ಕಾಲುವೆ ಮೇಲೆ ನಿರ್ಮಿಸಿದ್ದ  2 ಶೆಡ್ ಹಾಗೂ ರಾಜಕಾಲುವೆ ಮೇಲೆ ನಿರ್ಮಿಸಿದ್ದ 20 ಮೀಟರ್ ಉದ್ದದ ರಸ್ತೆಯನ್ನು ತೆರವುಗೊಳಿಸಲಾಗಿದೆ. ಜೊತೆಗೆ ಮುನೇಶ್ವರ ದೇವಸ್ಥಾನದ ಬಳಿ 200 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಲಾಗಿದೆ.‌


ಇದನ್ನೂ ಓದಿ: ಅಷ್ಟು ಜನರನ್ನು ನೋಡಿ ಅವಿವಾ ಹೇಳಿದ್ದೇನು ಗೊತ್ತಾ..?


ಒತ್ತುವರಿ ತೆರವುಗೊಳಿಸಲು 2 ಹಿಟಾಚಿಗಳನ್ನು ಬಳಸಿಕೊಂಡು ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿಯ ಭದ್ರತೆಯೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.ಮುನ್ನೇನಕೊಳಲಿನ ಸ್ಪೈಸ್ ಗಾರ್ಡನ್ ಪ್ರದೇಶದ ಸರ್ವೇ ಸಂಖ್ಯೆ 34, 19/3 ಮತ್ತು 17 ತಡೆಯಾಜ್ಞೆ ತಂದಿದ್ದು, ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಂಡ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತದೆ. 


ಮಹದೇವಪುರ ವಲಯ ಪಣತ್ತೂರು ಹಾಗೂ ದೊಡ್ಡಾನೆಕುಂದಿ ವ್ಯಾಪ್ತಿಯಲ್ಲಿ ದಿನಾಂಕ: 19-06-2023 ರಂದು ಒತ್ತುವರಿ ತೆರವು ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ರಾಜಕಾಲುವೆ ವಿಭಾಗದ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ಮಾಹಿತಿ‌ ನೀಡಿರುತ್ತಾರೆ‌.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.