Rajouri Encounter: ಮಂಗಳೂರಿನ ಕ್ಯಾ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮ, ಸಿಎಂ ಸಂತಾಪ
Jammu And Kashmir Encounter: 9 PARAನ ಗಾಯಗೊಂಡ ಮೇಜರ್‌ನನ್ನು ಉಧಮ್‌ಪುರದ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರಗಾಮಿ ಕೂಡ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ, ಆದರೆ ಆತನ ದೇಹವನ್ನು ಇನ್ನೂ ವಶಪಡಿಸಿಕೊಳ್ಳಲಾಗಿಲ್ಲ.
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆಯಿಂದ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಕ್ಯಾಪ್ಟನ್‍ಗಳು ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದವರನ್ನು ಮಂಗಳೂರಿನ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್, 9 PARAಯ ಕ್ಯಾಪ್ಟನ್ ಶುಭಂ ಮತ್ತು ಹವಾಲ್ದಾರ್ ಮಜೀದ್ ಎಂದು ಗುರುತಿಸಲಾಗಿದೆ. 4ನೇ ಯೋಧನ ಗುರುತು ಇನ್ನೂ ಪತ್ತೆಯಾಗಿಲ್ಲ. 9 PARAನ ಸೈನಿಕರು ಕ್ಯಾಪ್ಟನ್ ಪ್ರಾಂಜಲ್ ಅವರನ್ನು ಸ್ಥಳಾಂತರಿಸಲು ಅರಣ್ಯಕ್ಕೆ ತೆರಳಿದ್ದರು. ಆದರೆ ಅವರು ಉಗ್ರಗಾಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.
ರಜೌರಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಮಂಗಳೂರಿನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ನಡುವೆ ಅಡಗಿರುವ ಇಬ್ಬರು ಉಗ್ರರಿಗಾಗಿ ಸೇನಾ ಕಾರ್ಯಾಚರಣೆ ಮುಂದಿವರೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಜಾತಿ ಜನಗಣತಿ ವರದಿ ನಾಪತ್ತೆ: ಕಂಪ್ಯೂಟರ್‌ನಲ್ಲಿರೋದನ್ನ ಕಳ್ಳತನ ಮಾಡಲು ಆಗಲ್ವಲ್ಲಾ..?
ಗಾಯಗೊಂಡ 9 PARAನ ಮೇಜರ್‌ನನ್ನು ಉಧಮ್‌ಪುರದ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರಗಾಮಿ ಕೂಡ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ, ಆದರೆ ಆತನ ದೇಹವನ್ನು ಇನ್ನೂ ವಶಪಡಿಸಿಕೊಳ್ಳಲಾಗಿಲ್ಲ.
ದಕ್ಷಿಣ ಕನ್ನಡ ಮೂಲದ ಪ್ರಾಂಜಲ್: ಹುತಾತ್ಮರ ಪೈಕಿ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್ ಪ್ರಾಂಜಲ್ ಅವರು ಮಂಗಳೂರಿನ ಎಂಆರ್‌ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಅವರ ಏಕೈಕ ಪುತ್ರ. ಮೂಲತಃ ಅವಿಭಜಿತ ದಕ್ಷಿಣ ಕನ್ನಡದವರಾಗಿದ್ದ ವೆಂಕಟೇಶ್ ಮೇ 31ರಂದು ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದ ತಂದೆಯ ನಿವೃತ್ತಿ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ: ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಎನ್‍ಕೌಂಟರ್‍ನಲ್ಲಿ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಹುತಾತ್ಮರಾಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿಗೆ ಕರ್ನಾಟಕದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಸೈನಿಕರು ಹುತಾತ್ಮರಾದ ಸುದ್ದಿ ಅತ್ಯಂತ ದುಃಖಕರ. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಹುತಾತ್ಮ ಸೈನಿಕರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗಕ್ಕೆ ದೇವರು ಕರುಣಿಸಲಿ. ಮೃತ ಯೋಧರ ಅನನ್ಯ ದೇಶಭಕ್ತಿ, ತ್ಯಾಗ, ಬಲಿದಾನವನ್ನು ನಾಡು ಚಿರಕಾಲ ಸ್ಮರಿಸಲಿದೆ’ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನವರಲ್ಲ, ಬಿಜೆಪಿಯವರೇ ನನ್ನನ್ನು ಸೋಲಿಸಿದ್ದು: ವಿ. ಸೋಮಣ್ಣ ಬೇಸರ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.