ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದ ಮಲ್ಲಿಕಾರ್ಜುನ ಖರ್ಗೆ ಕೊರೊನಾ ದೃಢ, ಹೆಚ್ಚಿದ ಆತಂಕ
Mallikarjun Kharge Corona Positive: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಬೆಂಗಳೂರು: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಕೊರೊನಾ ಪಾಸಿಟಿವ್ ವರದಿ ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಮೇಕೆದಾಟು ಪಾದಯಾತ್ರೆ (Mekedatu Padayatre) ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆ ಆತಂಕ ಹೆಚ್ಚಿದೆ.
Mekedatu Padayatre: ಕಾಂಗ್ರೆಸ್ ಪಾದಯಾತ್ರೆಯಲ್ಲಿ ನೀರಿನ ಬಗ್ಗೆ ವಿಭಿನ್ನವಾಗಿ ಅರಿವು ಮೂಡಿಸುತ್ತಿರುವ ಸೈಯದ್ ಅಹಮದ್ ಹುಸೇನ್
ಮೊದಲ ದಿನವೇ ಸುಮಾರು ನಾಲ್ಕು ಕಿಲೋ ಮೀಟರ್ ನಡೆದು ಸುಸ್ತಾಗಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ (Siddaramaiah) ಜ್ವರ ಕಾಣಿಸಿಕೊಂಡಿತ್ತು. ವೈದ್ಯರು ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದರು.
ಅದಾದ ಬಳಿಕ ರಾಜ್ಯ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಪಾದಯಾತ್ರೆ (Congress Padayatre) ಕೈ ಬಿಡುವಂತೆ ಮನವಿ ಮಾಡಿತ್ತು. ಆದರೆ ಯಾವುದಕ್ಕೂ ಬಗ್ಗದ ಕೈ ನಾಯಕರು ಕೊರೊನಾ ಆತಂಕದ ನಡುವೆಯೇ ಪಾದಯಾತ್ರೆ ಮುಂದುವರೆಸಿದ್ದರು.
ಆದರೆ ಇದೀಗ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊವಿಡ್ ದೃಢ ಪಟ್ಟಿರುವುದು ಮತ್ತಷ್ಟು ಭೀತಿಗೆ ಕಾರಣವಾಗಿದೆ.
ನಿನ್ನೆ ರಾಮನಗರ ಜಿಲ್ಲೆಯ ಸಂಗಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನಕ್ಕೆ ಹಮ್ಮಿಕೊಂಡಿರುವ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಿಷೇಧಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಮಗಳಡಿ ಹಾಗೂ ಐಪಿಸಿ 188 ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.
ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ನಿಷೇಧ: ಸರ್ಕಾರ ಆದೇಶ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.