ರಾಜ್ಯಸಭೆ ಚುನಾವಣೆ ಗೆಲ್ಲಲು ಕಮಲ ಪಡೆ ರಣತಂತ್ರ! ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ರಾಜ್ಯಸಭಾ ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಂತ್ರಗಾರಿಕೆ ನಡೆಸುವುದಕ್ಕಾಗಿ ಬುಧವಾರ (ಇಂದು) ಶಾಸಕಾಂಗ ಪಕ್ಷದ ಸಭೆ ನಡೆಸಲು ಬಿಜೆಪಿ ಮುಂದಾಗಿದೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ.
ಬೆಂಗಳೂರು: ರಾಜ್ಯಸಭಾ ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಂತ್ರಗಾರಿಕೆ ನಡೆಸುವುದಕ್ಕಾಗಿ ಬುಧವಾರ (ಇಂದು) ಶಾಸಕಾಂಗ ಪಕ್ಷದ ಸಭೆ ನಡೆಸಲು ಬಿಜೆಪಿ ಮುಂದಾಗಿದೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದು, ಎಲ್ಲ ಶಾಸಕರು ಖುದ್ದು ಉಪಸ್ಥಿತರಿರುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:
ಬಿಜೆಪಿಯ ಎಲ್ಲಾ ಶಾಸಕರಿಗೂ ಕಡ್ಡಾಯವಾಗಿ ಹಾಜರಿರಲು ಸೂಚನೆ ನೀಡಲಾಗಿದೆ. ಇಂದು ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜ್ಯಸಭಾ ಚುನಾವಣೆ ಗೆಲ್ಲಲು ರಣತಂತ್ರ ಹೆಣೆಯಲು ಕಮಲ ಪಡೆ ರಣತಂತ್ರ ಹೆಣೆಯುತ್ತಿದೆ.
ಇಂದೇ ಯಾವ ಶಾಸಕರು, ಯಾರಿಗೆ ಮತ ಹಾಕಬೇಕು ಅಂತ ನಿರ್ಧಾರವಾಗಲಿದೆ. ಶಾಸಕರಿಗೆ ಹೇಗೆ ಮತದಾನ ಮಾಡಬೇಕು ಅಂತ ಮುಖಂಡರು ತಿಳಿಸಲಿದ್ದಾರೆ. ಶಾಸಕರು ಹಾಕುವ ಮತ ಅಸಿಂಧು ಆಗದಂತೆ ಎಚ್ಚರ ವಹಿಸಲು ಟ್ರೈನಿಂಗ್ ನೀಡಲಿದ್ದಾರೆ.
ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಬಿಜೆಪಿ ವಿಪ್ ಕೂಡ ಜಾರಿ ಮಾಡಬಹುದಾಗಿದೆ.ಮೂರು ಅಭ್ಯರ್ಥಿಗಳನ್ನ ಗೆಲ್ಲಿಸಲು ಹೇಗೆಲ್ಲಾ ಪ್ಲಾನ್ ಮಾಡಬೇಕು ಅಂತ ಚರ್ಚೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಈ ಸಭೆ ನಡೆಯಲಿದೆ. ಹಲವು ತಿಂಗಳು ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದೆ.
ಇದನ್ನೂ ಓದಿ:
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.