ರಾಜ್ಯಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗೆಲುವು

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್. ಹನುಮಂತಯ್ಯ, ನಾಸೀರ್ ಹುಸೇನ್ ಮತ್ತು ಜಿ.ಸಿ.ಚಂದ್ರಶೇಖರ್ ಮತ್ತು ಬಿಜೆಪಿಯ ರಾಜೀವ್ ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ.

Last Updated : Mar 23, 2018, 09:02 PM IST
ರಾಜ್ಯಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗೆಲುವು title=

ಬೆಂಗಳೂರು: ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್. ಹನುಮಂತಯ್ಯ, ನಾಸೀರ್ ಹುಸೇನ್ ಮತ್ತು ಜಿ.ಸಿ.ಚಂದ್ರಶೇಖರ್ ಮತ್ತು ಬಿಜೆಪಿಯ ರಾಜೀವ್ ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಒಟ್ಟು 136 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಎಲ್‌.ಹನುಮಂತಯ್ಯ 44 , ನಾಸೀರ್‌ ಹುಸೇನ್‌ 42 ಹಾಗೂ ಜಿ.ಸಿ ಚಂದ್ರಶೇಖರ್‌ 46 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಇನ್ನು ಬಿಜೆಪಿಯ ರಾಜೀವ್ ಚಂದ್ರಶೇಖರ್‌ 50 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಆದರೆ ಜೆಡಿಎಸ್‌ ಶಾಸಕರು ಮತದಾನ ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಂ ಫಾರೂಕ್‌ ಹೀನಾಯ ಸೋಲು ಅನುಭವಿಸಬೇಕಾಯಿತು. 

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು(ಮಾರ್ಚ್ 23) ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ನಿಂದ ಎಲ್.ಹನುಮಂತಯ್ಯ, ನಾಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಸ್ಪರ್ಧಿಸಿದ್ದರೆ, ಜೆಡಿಎಸ್'ನಿಂದ ಬಿ.ಎಂ.ಫಾರೂಕ್ ಸ್ಪರ್ಧಿಸಿದ್ದರು.

ಕಾಂಗ್ರೆಸ್ ಪಕ್ಷದ ಓರ್ವ ಶಾಸಕ ಅನಾರೋಗ್ಯದ ಕಾರಣ ಮತ ಚಲಾಯಿಸಿರಲಿಲ್ಲ. ಅಲ್ಲದೆ, ಜೆಡಿಎಸ್ ಶಾಸಕರಾದ ಹೆಚ್.ಡಿ.ರೇವಣ್ಣ ಹಾಗೂ ಸಾ.ರಾ.ಮಹೇಶ್ ಹೊರತುಪಡಿಸಿ ಉಳಿದ 28 ಶಾಸಕರು ಮತದಾನ ಬಹಿಷ್ಕರಿಸಿದ್ದ ಕಾರಣ ಒಟ್ಟು 188 ಮತಗಳು ಮಾತ್ರ ಚಲಾವಣೆಯಾಗಿದ್ದವು. 

Trending News