ಕೊರೊನಾದಿಂದ ಕರ್ನಾಟಕದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಸಾವು
ಇತ್ತೀಚೆಗಷ್ಟೇ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಕೊರೊನಾದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರು: ಇತ್ತೀಚೆಗಷ್ಟೇ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಕೊರೊನಾದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
55 ವರ್ಷದ ಗಸ್ತಿ ಅವರು ಕೊರೊನಾಗೆ ಒಳಾಗಿ ಕಳೆದ ಎರಡು ವಾರಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಈಗ ಬಹು ಅಂಗಾಂಗ ವೈಪಲ್ಯದಿಂದಾಗಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ರಾಯಚೂರು ಜಿಲ್ಲೆಯ ಲಿಂಗಸೂರಿನವರಾದ ಗಸ್ತಿ ಕಳೆದ ಎರಡು ವಾರಗಳಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದರು.
ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ
ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಸದಸ್ಯರಾಗಿದ್ದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರಾಗಿದ್ದರು. ಅವರು ಬಳ್ಳಾರಿ ಜಿಲ್ಲೆ, ಕೊಪ್ಪಳ ಜಿಲ್ಲೆ ಮತ್ತು ರಾಯಚೂರು ಜಿಲ್ಲೆಯ ಪಕ್ಷದ ಉಸ್ತುವಾರಿ ವಹಿಸಿದ್ದರು.
2020 ರಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವವರೆಗೆ ಎಂದಿಗೂ ಅವರು ಬೆಳಕಿಗೆ ಬಂದಿರಲಿಲ್ಲ, ತಳಮಟ್ಟದ ಕಾರ್ಯವನ್ನು ಪರಿಗಣಿಸಿ ಅವರಿಗೆ ಈ ಅವಕಾಶವನ್ನು ನೀಡಲಾಯಿತು.