ಡಿಕೆಶಿ ಅರೆಸ್ಟ್: ರಾಮನಗರ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 

Last Updated : Sep 4, 2019, 10:32 AM IST
ಡಿಕೆಶಿ ಅರೆಸ್ಟ್: ರಾಮನಗರ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ title=

ರಾಮನಗರ: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧನವನ್ನು ವಿರೋಧಿಸಿ ಇಂದು ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬಂದ್ ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಈ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಆದೇಶ ಹೊರಡಿಸಿದ್ದು, ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಐಜೂರು ವೃತ್ತದಲ್ಲಿ ಎರಡು ಕೆಎಸ್ಆರ್ಪಿ ತುಕುದಿಗಳನ್ನು ನಿಯೋಜಿಸಲಾಗಿದೆ. 

ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸುತ್ತಿದ್ದಂತೆಯೇ ಬೆಂಗಳೂರು, ಕನಕಪುರ, ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿಸುತ್ತಿದ್ದಾರೆ.

ಹಲವೆಡೆ ಟೈರ್ ಮತ್ತು ಬಸ್ಸುಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ರಾಮನಗರ ಮತ್ತು ಕನಕಪುರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Trending News