ಮಹಾದಾಯಿ ಯೋಜನೆ ಜಾರಿ ಬಗ್ಗೆ ಗುಡ್ ನ್ಯೂಸ್ ನೀಡಿದ ರಮೇಶ್ ಜಾರಕಿಹೊಳಿ

ನಮ್ಮ ಸರ್ಕಾರ ಇರುವಾಗಲೇ ಆದಷ್ಟು ಬೇಗ ಮಹಾದಾಯಿ ಯೋಜನೆ ಜಾರಿಗೆ ತರುತ್ತೇವೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.

Last Updated : Feb 24, 2020, 11:40 AM IST
ಮಹಾದಾಯಿ ಯೋಜನೆ ಜಾರಿ ಬಗ್ಗೆ ಗುಡ್ ನ್ಯೂಸ್ ನೀಡಿದ ರಮೇಶ್ ಜಾರಕಿಹೊಳಿ  title=

ದಾವಣಗೆರೆ : ಮಹಾದಾಯಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ರಾಜ್ಯದ ಜನತೆಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ನಮ್ಮ ಸರ್ಕಾರ ಇರುವಾಗಲೇ ಆದಷ್ಟು ಬೇಗ ಮಹಾದಾಯಿ ಯೋಜನೆ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ನೀರಾವರಿ ಸಚಿವರು, ಮಹಾದಾಯಿ ಯೋಜನೆ ಜಾರಿಗೆ ಈಗಾಗಲೇ ಹಸಿರು ನಿಶಾನೆ ದೊರೆತಿದ್ದು, ಕೆಲ ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ. ಈ ಸಂಬಂಧ ಇದೇ ಫೆಬ್ರವರಿ 26ರಂದು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸುವುದಾಗಿ ಮಾಹಿತಿ ನೀಡಿದರು. ಅಲ್ಲದೆ ಮಹಾದಾಯಿ ಯೋಜನೆ ಜಾರಿ ಕುರಿತಂತೆ ಮಾತುಕತೆ ನಡೆಸಿ ಸಾಧ್ಯವಾದಷ್ಟು ಬೇಗ ಗೆಜೆಟ್ ಮಾಡಿ ಕಾರ್ಯರೂಪಕ್ಕೆ ತರುವುದಾಗಿ ತಿಳಿಸಿದರು.

ನಮ್ಮ ಸರ್ಕಾರ ಇರುವಾಗಲೇ ಆದಷ್ಟು ಬೇಗ ಮಹಾದಾಯಿ ಯೋಜನೆ ಜಾರಿಗೆ ತರುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ, ಯೋಜನೆ ಜಾರಿಗೆ ಆದಷ್ಟು ಬೇಗ ಹಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದೇವೆ ಎಂದರು.

ನನ್ನ ಹೇಳಿಕೆ ಟ್ವಿಸ್ಟ್ ಮಾಡಲಾಗಿದೆ:
ಇದೇ ಸಂದರ್ಭದಲಿ ರಾಜೀನಾಮೆ ನೀಡುವ ಹೇಳಿಕೆ ಸಂಬಂಧ ಮಾತನಾಡಿದ ರಮೇಶ್ ಜಾರಕಿಹೊಳಿ, "ನಾನು ರಾಜೀನಾಮೆ ನೀಡುವ ಬಗ್ಗೆ ಹೇಳಿಕೆ ನೀಡಿಲ್ಲ. ಸುಮ್ಮನೆ ಗೊಂದಲ ಸೃಷ್ಟಿಸಬೇಡಿ. ನಾನು ಹಾಗೆ ಹೇಳಿರುವ ವಿಡಿಯೋ ನಿಮ್ಮ ಬಳಿ ಇದ್ದರೆ ಅದನ್ನು ತೋರಿಸಿ. ನನ್ನ ಹೇಳಿಕೆಯನ್ನು ಟ್ವಿಸ್ಟ್ ಮಾಡಲಾಗಿದೆ. ಈ ಕುರಿತು ಯಾರಿಗೆ ಸ್ಪಷ್ಟನೆ ನೀಡಬೇಕೋ ಅವರಿಗೆ ನೀಡುತ್ತೇನೆ ಎಂದರು.

Trending News