Ramesh Jarakiholi : ರಾಸಲೀಲೆ ಪ್ರಕರಣದಲ್ಲಿ ಮಹತ್ವದ ತಿರುವು, ರಮೇಶ್ ಜಾರಕಿಹೊಳಿ ರಾಜೀನಾಮೆ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

Written by - Ranjitha R K | Last Updated : Mar 3, 2021, 01:29 PM IST
  • ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.
  • ಪ್ರಕರಣದ ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
  • ಈ ಸಂಬಂಧ ಯಡಿಯೂರಪ್ಪಗೆ ಅವರು ಪತ್ರ ಬರೆದಿದ್ದಾರೆ.
Ramesh Jarakiholi : ರಾಸಲೀಲೆ ಪ್ರಕರಣದಲ್ಲಿ ಮಹತ್ವದ ತಿರುವು,  ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು : ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ (Ramesh Jarakiholi) ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಸಲೀಲೆಯ ಸೀಡಿ (CD) ಬಹಿರಂಗಗೊಂಡ 20 ಗಂಟೆಗಳಲ್ಲಿಯೇ ರಮೇಶ್ ಜಾರಕಿಹೊಳಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಯಡಿಯೂರಪ್ಪಗೆ (BS Yediyurappa) ಪತ್ರ ಬರೆದಿದ್ದಾರೆ.

ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ಏನಿದೆ..?
ರಾಸಲೀಲೆ ಪ್ರಕರಣದ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ (Yediyurappa) ಪತ್ರ ಬರೆದಿರುವ ರಮೇಶ್ ಜಾರಕಿಹೊಳಿ, ಪ್ರಕರಣದ ಹಿನ್ನೆಲೆಯಲ್ಲಿ ರಾಜೀನಾಮೆ  (Resignation) ನೀಡುತ್ತೇನೆ. ಐದು ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ  ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ನಡೆಯಬೇಕು. ಆರೋಪಮುಕ್ತರಾದ ಮೇಲೆ ಮರಳಿ ಸಚಿವ ಸ್ಥಾನ ನೀಡಿ ಎಂದು ಜಾರಕಿ ಹೊಳಿ ಹೇಳಿದ್ದಾರೆ.

ಇದನ್ನೂ ಓದಿ : ಸಾಹುಕಾರರ' ಸರಸ ಸಿಡಿ..! ಪ್ರತಿಪಕ್ಷಗಳ ಕೈಗೆ ಬ್ರಹ್ಮಾಸ್ತ್ರ, ಮುಖ್ಯಮಂತ್ರಿ ಮೇಲೆ ಒತ್ತಡ

ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿದ್ದ ಪ್ರತಿಪಕ್ಷ: 
ರಮೇಶ್ ಜಾರಕಿಹೊಳಿ (Ramesh jarakiholi) ರಾಸಲೀಲೆ ಸಿಡಿ ಬಹಿರಂಗವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಯಡಿಯೂರಪ್ಪ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದವು.  ಅಲ್ಲದೆ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿದ್ದವು. ಜಾರಕಿಹೊಳಿ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆ (Protest) ಕೂಡಾ ನಡೆದಿತ್ತು. 

ಇದನ್ನೂ ಓದಿ 'ಅದು ಫೇಕ್ ವಿಡಿಯೋ ಯಾಕೆ ರಾಜೀನಾಮೆ ನೀಡಬೇಕು?’

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

More Stories

Trending News