Ramesh Jarkiholi CD Case: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು?

ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲ್ಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

Written by - Yashaswini V | Last Updated : Mar 20, 2021, 01:14 PM IST
  • ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಸಿಂಗ್ ಪ್ರತಿಕ್ರಿಯೆ
  • ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲ್ಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
  • ಕಾಂಗ್ರೆಸ್ ಸುಳ್ಳು ಮಾಹಿತಿ ನೀಡಿ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ಅರುಣ್ ಸಿಂಗ್
Ramesh Jarkiholi CD Case: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು? title=
Arun Singh reaction on Ramesh Jarkiholi CD Case

ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲ್ಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ನೈತಿಕ ಹೊಣೆ ಹೊತ್ತು ತಾವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ ಎಂದಿದ್ದಾರೆ.

ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲ್ಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷವು ಸಿಡಿ ಪ್ರಕರಣದಲ್ಲಿ ಇಲ್ಲಸಲ್ಲದ ಆರೋಪ ಮಾಡುತ್ತಾ, ಸುಳ್ಳು ಮಾಹಿತಿ ನೀಡಿ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ - ಸಚಿವ ಸ್ಥಾನ ಕಳೆದುಕೊಂಡ 'ಸಾಹುಕಾರ್'ಗೆ ಬಿಜೆಪಿಯಿಂದ ಮತ್ತೊಂದು ಶಾಕ್!

ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ತಕ್ಷಣವೇ ಅವರಿಂದ ರಾಜೀನಾಮೆ ಪಡೆಯಲಾಯಿತು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಇದು ಸಾಧ್ಯವಿಲ್ಲ. ಕೇವಲ ಬಿಜೆಪಿಯಷ್ಟೇ ಇಂತಹ ನಿರ್ಧಾರ ಕೈಗೊಳ್ಳಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ - HD Kumaraswamy: 'ರಮೇಶ್ CD ಮಾಹಿತಿ ಕೊಟ್ಟಿದ್ದು ನಾನು; ಮಹಾನಾಯಕ ಯಾರೆಂದು ಗೊತ್ತು'

ಇದೇ ಸಂದರ್ಭದಲ್ಲಿ ಆರು ಸಚಿವರು ಕೋರ್ಟ್ ಮೆಟ್ಟಿಲೇರಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅರುಣ್ ಸಿಂಗ್ ಸಚಿವರ ಪರವಾಗಿ ಬ್ಯಾಟಿಂಗ್ ಮಾಡಿದ್ದು ತಮ್ಮ ವಿರುದ್ಧ ತೇಜೋವಧೆ ಮಾಡುತ್ತಾರೆಂಬ ಕಾರಣಕ್ಕೆ ಅವರು ಕೋರ್ಟ್ ಮೊರೆಹೋಗಿದ್ದಾರೆ ಎಂದು ಸಚಿವರ ನಡೆಯನ್ನು ಸಮರ್ಥಿಸಿಕೊಂಡರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News