'ಜನವರಿ ಮೊದಲ ವಾರವೇ ಸಂಪುಟ ವಿಸ್ತರಣೆ'

ಜನವರಿ ಮೊದಲ ವಾರದಲ್ಲಿ ಆ ಪ್ರಕ್ರಿಯೆ ನಡೆಯಬಹುದು- ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

Last Updated : Dec 17, 2020, 06:15 PM IST
  • ಗ್ರಾಮ ಪಂಚಾಯಿತಿ ಚುನಾವಣೆ ಬಂದಿದ್ದರಿಂದಾಗಿ, ಸಂಪುಟ ವಿಸ್ತರಣೆಗೆ ತಾತ್ಕಾಲಿಕ ತಡೆಯಾಗಿದೆ
  • ಜನವರಿ ಮೊದಲ ವಾರದಲ್ಲಿ ಆ ಪ್ರಕ್ರಿಯೆ ನಡೆಯಬಹುದು- ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
  • 'ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಇಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಪ್ರತಾಪಚಂದ್ರ ಶೆಟ್ಟಿ ಬಹಳ ಒಳ್ಳೆಯ ಮನುಷ್ಯ. ಅವರು ಪಕ್ಷಕ್ಕೋಸ್ಕರ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬಾರದು.
'ಜನವರಿ ಮೊದಲ ವಾರವೇ ಸಂಪುಟ ವಿಸ್ತರಣೆ' title=

ಬೆಳಗಾವಿ: 'ಗ್ರಾಮ ಪಂಚಾಯಿತಿ ಚುನಾವಣೆ ಬಂದಿದ್ದರಿಂದಾಗಿ, ಸಂಪುಟ ವಿಸ್ತರಣೆಗೆ ತಾತ್ಕಾಲಿಕ ತಡೆಯಾಗಿದೆ. ಜನವರಿ ಮೊದಲ ವಾರದಲ್ಲಿ ಆ ಪ್ರಕ್ರಿಯೆ ನಡೆಯಬಹುದು' ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿ ನಡೆದ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಕಾಂಗ್ರೆಸ್(Congress) ಪಕ್ಷಕ್ಕೆ ಬಹುಮತ ಇಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಪ್ರತಾಪಚಂದ್ರ ಶೆಟ್ಟಿ ಬಹಳ ಒಳ್ಳೆಯ ಮನುಷ್ಯ. ಅವರು ಪಕ್ಷಕ್ಕೋಸ್ಕರ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬಾರದು. ರಾಜೀನಾಮೆ ನೀಡಿ ವ್ಯಕ್ತಿತ್ವ ಉಳಿಸಿಕೊಳ್ಳುವುದು ಒಳ್ಳೆಯದು' ಎಂದರು.

ಮೂರು ತಿಂಗಳಲ್ಲಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ - ಸಚಿವ ಸಿ.ಸಿ.ಪಾಟೀಲ

'ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆ ಬಳಿಕ ವರಿಷ್ಠರು ನಿರ್ಣಯ ಕೈಗೊಳ್ಳುತ್ತಾರೆ. ಯಾರಿಗೇ ಟಿಕೆಟ್‌ ಕೊಟ್ಟರೂ ಅವರ ಪರ ಕೆಲಸಕ್ಕೆ ತಯಾರಿದ್ದೇನೆ' ಎಂದು ಪ್ರತಿಕ್ರಿಯಿಸಿದರು.

'ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ'

Trending News