ಬೆಂಗಳೂರು: ಮುಖ್ಯಮಂತ್ರಿ, ಮತ್ತು ಗೃಹಮಂತ್ರಿ, ಮಹಿಳೆಯರು ಮತ್ತು ಪೊಲೀಸ್ ಅಧಿಕಾರಿಗಳ ಆತ್ಮಗೌರವ ರಕ್ಷಣೆಗಾಗಿ ರಮೇಶ್ ಜಾರಕಿಹೋಳಿ ಅವರನ್ನು ಬಂಧಿಸಬೇಕೆಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Baba Ramdev : 'ಅವರ ಅವರಪ್ಪನಿಂದಲೂ ಕೂಡ ನನ್ನನ್ನು ಬಂಧಿಸಲು ಸಾಧ್ಯವಿಲ್ಲ'


ಪಕ್ಷದ ಕಚೇರಿಯಲ್ಲಿ ಸಿದ್ಧರಾಮಯ್ಯ ನವರ ಜೊತೆಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು "ನಮಗೆ ವ್ಯಕ್ತಿಗಿಂತ ಪೋಲೀಸ್ ಇಲಾಖೆ ಗೌರವ ಮುಖ್ಯವಾಗಿದೆ. ಪೊಲೀಸ್ ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲಾಗದ ಸ್ಥಿತಿ ರಾಜ್ಯದಲ್ಲಿ  ನಿರ್ಮಾಣವಾಗುತ್ತಿದೆ. ಐಪಿಸಿ ಸೆಕ್ಷನ್ 376 ಅಡಿಯ ಆರೋಪಿಯನ್ನು ಸ್ವತಂತ್ರವಾಗಿ ತಿರುಗಾಡಿಕೊಂಡಿರಲು ಬಿಟ್ಟಿದ್ದಾರೆ. ಆ ಮೂಲಕ ಸಿಎಂ ಯಡಿಯೂರಪ್ಪನವರು, ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾರೆ ಎಂದು ಡಿಕೆಶಿ (D K Shivakumar) ಟೀಕಾ ಪ್ರಹಾರ ನಡೆಸಿದರು.


ರಾಜಕಾರಣಿಗಳು ಇಂದು ಇರುತ್ತಾರೆ, ನಾಳೆ ಹೋಗುತ್ತಾರೆ.ಆದರೆ ಪೊಲೀಸರು ತಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಬಾರದು. ನೀವು ಹಾಕಿಕೊಂಡಿರುವ ಸ್ಟಾರ್ ಗಳಿಗೆ ಧಕ್ಕೆ ತಂದುಕೊಳ್ಳಬಾರದು. ಕೆಟ್ಟ ಉದಾಹರಣೆಯಾಗಬಾರದು ಎಂದು ಅವರು ಮನವಿ ಮಾಡಿದರು.


 


Online News Publishers ಗೆ 15 ದಿನಗಳ ಡೆಡ್ ಲೈನ್ ನಿಗದಿಪಡಿಸಿದ ಕೇಂದ್ರ

ಈ ನೆಲದ ಕಾನೂನು ಏನು ಹೇಳುತ್ತದೆ? ವಿಡಿಯೋ ಅಸಲಿಯಾದರೆ ರೇಪ್ ಕೇಸ್ ಹಾಕುವುದಾಗಿ ಗೃಹ ಸಚಿವರೇ ಹೇಳಿದ್ದರು. ಈಗ ಆರೋಪಿ ವಿರುದ್ಧ FIR ಆಗಿದೆ. ಆದರೂ ಅರೆಸ್ಟ್ ಇಲ್ಲ. ಈ ಮಧ್ಯೆ ಕೊರೋನಾ ಸೋಂಕು ಅಂತಾ ನೆಪ ಹೇಳಿದರು. ಎಲ್ಲರೂ ಸೋಂಕು ಬಂದರೆ ಬೆಂಗಳೂರಿನ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ. ಅವರು ಗೋಕಾಕ್ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅಂತಹ ಸ್ಪೆಷಾಲಿಟಿ ಆಸ್ಪತ್ರೆ ಇದೆಯೇ? ಎಲ್ಲಿ ಅವರ ಕೊರೋನಾ ರಿಪೋರ್ಟ್‌? ಟ್ರಾಕಿಂಗ್ ರೆಕಾರ್ಡ್ ಎಲ್ಲಿ? ಯಾರಾದರೂ ಸೋಂಕಿತ ಪಿಪಿಇ ಕಿಟ್ ಹಾಕಿಕೊಂಡು ಚಿಕಿತ್ಸೆ ಪಡೆಯುವುದನ್ನು ಎಲ್ಲಿಯಾದರೂ ನೋಡಿದ್ದೀರಾ?


ನಾನು ಕೇವಲ ನರ್ಸ್, ಡಾಕ್ಟರ್, ಶವ ಸಾಗಿಸುವರು ಮಾತ್ರ ಪಿಪಿಇ ಕಿಟ್ ಹಾಕಿಕೊಳ್ಳೋದು ನೋಡಿದ್ದೆ. ಆರೋಪಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಹೇಗೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ? ನೀವೆಲ್ಲ ಹೇಗೆ ಸಹಾಯ ಮಾಡುತ್ತಿದ್ದೀರಿ? ಹೇಗೆ ಅವರ ರಕ್ಷಣೆಗೆ ನಿಂತಿದ್ದೀರಿ ನೋಡಿ ಎಂದು ಅವರು ಕಿಡಿಕಾರಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.