ರಾಮೇಶ್ವರಕೆಫೆ ಸ್ಪೋಟ ಪ್ರಕರಣ: ಆರೋಪಿ ಪತ್ತೆಗೆ ತನಿಖೆ ಚುರುಕು-ಸಿಎಂ ಸಿದ್ದರಾಮಯ್ಯ
CM Siddaramaiah: ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು: ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ , ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ನಾನೂ ಕೂಡ ಸ್ಥಳಕ್ಕೆ ತೆರಳಲಿದ್ದೇನೆ ಎಂದರು. ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ತನಿಖೆ ನಡೆಯುತ್ತಿದೆ ಎಂದರು.
ರಾಜಕೀಯ ಹೇಳಿಕೆ
ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ರಾಜಕೀಯವಾದ ಹೇಳಿಕೆ ನೀಡಿದ್ದಾರೆ. ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ-ಸಿದ್ದರಾಮಯ್ಯ ಒಬ್ಬ ಅಸಮರ್ಥ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ
ತನಿಖೆ ನಡೆಯುತ್ತಿದೆ
ಸ್ಪೋಟದ ಘಟನೆಯನ್ನು ನಾನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದರು. ಭಯೋತ್ಪಾದಕ ಕೃತ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿ ತನಿಖೆ ಇನ್ನೂ ನಡೆಯುತ್ತಿದೆ ಎಂದರು.
ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ
ವಿಧಾನ ಸೌಧದ ಪ್ರಕರಣ ಕುರಿತು ಎಫ್.ಎಸ್.ಎಲ್ ವರದಿಯನ್ನು ಸರ್ಕಾರ ಬಹಿರಂಗ ಮಾಡುತ್ತಿಲ್ಲ. ಸತ್ಯವನ್ನು ತಿರುಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಯೇ ತೀರುತ್ತದೆ ಎಂದರು.
ಇದನ್ನೂ ಓದಿ-ಕರ್ನಾಟಕದಲ್ಲಿ ಕೇವಲ 3 ವರ್ಷದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ 22000ಕ್ಕೆ ದ್ವಿಗುಣ : ಡಿಜಿಪಿ ಅಲೋಕ್ ಮೋಹನ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.