ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ: ಗಾಯಾಳುಗಳ ಚಿಕಿತ್ಸೆ ವೆಚ್ಚ ಭರಿಸಲಾಗುವುದು-ಡಿಸಿಎಂ ಡಿ.ಕೆ. ಶಿವಕುಮಾರ್

DK Shivakumar: "ನಿನ್ನೆಯ ಸ್ಫೋಟದ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದುರ್ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.  

Written by - Savita M B | Last Updated : Mar 2, 2024, 01:19 PM IST
  • ಪ್ರಕರಣದ ತನಿಖೆಗೆ 7-8 ತಂಡಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಲಾಗುತ್ತಿದೆ.
  • ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ ಎಂಬ ಬಗ್ಗೆ ವಿಡಿಯೋ ಸಿಕ್ಕಿವೆ. ಅವನ ಚಹರೆ ಬಗ್ಗೆ ಸುಳಿವು ಸಿಕ್ಕಿದೆ.
ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ: ಗಾಯಾಳುಗಳ ಚಿಕಿತ್ಸೆ ವೆಚ್ಚ ಭರಿಸಲಾಗುವುದು-ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು: ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶನಿವಾರ ಹೇಳಿದ್ದಿಷ್ಟು; "ಪ್ರಕರಣದ ತನಿಖೆಗೆ 7-8 ತಂಡಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಲಾಗುತ್ತಿದೆ. ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ ಎಂಬ ಬಗ್ಗೆ ವಿಡಿಯೋ ಸಿಕ್ಕಿವೆ. ಅವನ ಚಹರೆ ಬಗ್ಗೆ ಸುಳಿವು ಸಿಕ್ಕಿದೆ. ಈ ತನಿಖೆಯ ಮಾಹಿತಿಯನ್ನು ಈ ಹಂತದಲ್ಲಿ ಬಹಿರಂಗಪಡಿಸುವುದಿಲ್ಲ. ಪೊಲೀಸ್ ಅಧಿಕಾರಿಗಳು ತನಿಖೆ ಮಾಡಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಈ ಪ್ರಕರಣದಲ್ಲಿ ಪರಿಣಾಮಕಾರಿ ತನಿಖೆ ನಡೆಯಲಿದೆ.

ಬಿಜೆಪಿ ನಾಯಕರು ಏನೇ ಟೀಕೆ ಮಾಡಿಕೊಳ್ಳಲಿ ನಾವು ಅವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ನಮಗೆ ರಾಜ್ಯದ ಘನತೆ ಕಾಪಾಡುವುದು ಪ್ರಮುಖ ಆದ್ಯತೆ. ಈ ಪ್ರಕರಣದಲ್ಲಿ ಸಹಕಾರ ಕೊಟ್ಟರೂ ಸರಿ, ರಾಜಕಾರಣ ಮಾಡಿದರೂ ಸರಿ. ನಾವು ಮಾತ್ರ ಈ ಪ್ರಕರಣವನ್ನು ಎಲ್ಲಾ ಆಯಾಮದಲ್ಲಿ ನೋಡಿ ತನಿಖೆ ಮಾಡಲಾಗುವುದು."‌

ಇದನ್ನೂ ಓದಿ-ಜಾತಿ ಗಣತಿ ವರದಿ ಸಲ್ಲಿಕೆ ವಿಚಾರ, ಶೀಲ್ಡ್ ನಲ್ಲಿ ಏನಿದೆ ಗೊತ್ತಿಲ್ಲ

ಮಂಗಳೂರು ಸ್ಫೋಟದ ಲಿಂಕ್ ಇರುವ ಅನುಮಾನವಿದೆ:
ಇದು ಸಂಘಟನೆಗಳ ಕೆಲಸವೇ ಅಥವಾ ಬೇರೆಯವರ ಕೃತ್ಯವೇ ಎಂದು ಕೇಳಿದಾಗ, "ಮಂಗಳೂರಿನ ಘಟನೆಗೂ ಇದಕ್ಕೂ ಲಿಂಕ್ ಇರುವಂತೆ ಕಾಣುತ್ತಿದೆ. ಎರಡೂ ಕಡೆ ಬಳಸಿದ ಸ್ಫೋಟಕ ಸಾಮಾಗ್ರಿಗಳಲ್ಲಿ ಸಾಮ್ಯತೆ ಇದೆ. ಹೀಗಾಗಿ ಮಂಗಳೂರು ಹಾಗೂ ಶಿವಮೊಗ್ಗ ಪೊಲೀಸರು ಕೂಡ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಜನತೆ ಆತಂಕ ಪಡುವ ಅಗತ್ಯವಿಲ್ಲ" ಎಂದು ತಿಳಿಸಿದರು.

ಬೆಂಗಳೂರು ಹೆಸರು ಹಾಳು ಮಾಡುವ ಪ್ರಯತ್ನದ ಬಗ್ಗೆ ಗೊತ್ತಿದೆ:
ಸಹಕಾರ ನೀಡುತ್ತೇವೆ ಆದರೆ ಪ್ರಕರಣ ಮುಚ್ಚಿಹಾಕಬಾರದು ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ನಾವು ನೋಡುತ್ತಿದ್ದೇವೆ. ಅವರ ಸಹಕಾರ ಬೇಡ. ಅವರು ಬೆಂಗಳೂರಿನ ಹೆಸರು ಹಾಳು ಮಾಡಲು ಏನೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ನಮ್ಮ ಗಮನಕ್ಕೆ ಇದೆ" ಎಂದು ಕಿಡಿಕಾರಿದರು.

ಇದನ್ನೂ ಓದಿ-ಮಾರ್ಚ್ 2ರಂದು BIFFನಲ್ಲಿ ಪ್ರದರ್ಶನಗೊಳ್ಳಲಿರುವ ಸಿನಿಮಾಗಳು, ಇಲ್ಲಿವೆ ತಿಳಿದುಕೊಳ್ಳಿ

ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, "ಆ ರೀತಿ ಇಲ್ಲ. ಬಿಜೆಪಿ ಅವಧಿಯಲ್ಲೂ ಇಂತಹ ಘಟನೆಗಳು ನಡೆದಿವೆ. ಸಂಸತ್ತಿನಲ್ಲಿ ಏನಾಯ್ತು ಎಂದು ಎಲ್ಲರೂ ನೋಡಿದ್ದೇವೆ" ಎಂದರು.

ಗಾಯಾಳುಗಳ ಚಿಕಿತ್ಸೆ ವೆಚ್ಚ ಭರಿಸಲಾಗುವುದು:
ಗಾಯಾಳುಗಳ ವಿಚಾರವಾಗಿ ಕೇಳಿದಾಗ, "ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಬಿಬಿಎಂಪಿ ವತಿಯಿಂದ ಭರಿಸಲಾಗುವುದು. ಪರಿಹಾರ ನೀಡುವ ಸಂದರ್ಭ ಬಂದರೆ ಅದನ್ನು ನೀಡುತ್ತೇವೆ" ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News