ರಾಮೇಶ್ವರ ಕೆಫೆ ಪ್ರಕರಣ: ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ- ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ

ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ  ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

Written by - Prashobh Devanahalli | Edited by - Bhavishya Shetty | Last Updated : Mar 2, 2024, 06:37 PM IST
    • ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ
    • ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ
    • ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ
ರಾಮೇಶ್ವರ ಕೆಫೆ ಪ್ರಕರಣ: ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ- ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ  title=
File Photo

ಬೆಂಗಳೂರು: ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ  ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇದನ್ನೂ ಓದಿ: ಟಿ20 ವಿಶ್ವಕಪ್’ಗೆ ಭಾರತ ತಂಡ… ಅಂದು ಏಕದಿನದಲ್ಲಿ ಮಿಂಚಿದ್ದ ಮೂವರು ಸ್ಟಾರ್ ಆಟಗಾರರಿಗಿಲ್ಲ ಸ್ಥಾನ

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲು ಸೂಚಿಸಿದ ಮುಖ್ಯಮಂತ್ರಿ ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದರು.

ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು.   

ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ. ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು.  ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ: Rameshwaram Cafe Blast : ಪ್ರಾಣ ಉಳಿಸಿತು ಅಮ್ಮನ ಆ ಕರೆ ! ತಾಯಿ ಹೃದಯಕ್ಕೆ ತಿಳಿಯಿತೇ ಮಗನಿಗೆ ಎದುರಾಗಿದ್ದ ಕಂಟಕ 

ಸಭೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ, ಗೃಹ ಸಚಿವ ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ , ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ,  ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್,  ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್,  ಪೊಲೀಸ್ ಆಯುಕ್ತ ಬಿ.ದಯಾನಂದ್ ಮೊದಲಾದವರು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News