ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ - ಎನ್ ಐಎಯಿಂದ ಬಾಂಬ್ ಇಟ್ಟಿದ್ದ ಉಗ್ರ ಬಂಧನ
Rameshwaram cafe blast Case : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತಂಡ ಬಾಂಬ್ ಇಟ್ಟಿದ್ದ ಉಗ್ರನನ್ನು ಬಂಧಿಸಲಾಗಿದೆ.
ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತಂಡ ಬಾಂಬ್ ಇಟ್ಟಿದ್ದ ಉಗ್ರನನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಸಾವೀರ್ ಶಾಜೀನ್ ಹುಸೇನ್ ಎಂದು ಗುರುತಿಸಲಾಗಿದೆ. ಉತ್ತರ ಭಾರತದ ರಾಜ್ಯವೊಂದರಿಂದ ಈತನನ್ನು ಬಂಧಿಸಲಾಗಿದೆ.
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿದ್ದ ಎನ್ ಐಎ ತಂಡ ಇದೀಗ ಇಬ್ಬರು ಉಗ್ರರನ್ನು ಬಂಧಿಸಿದೆ. ಕೆಫೆಯಲ್ಲಿ ಬಾಂಬ್ ಇರಿಸಿದ್ದ ಮುಸಾವೀರ್ ಶಾಜೀನ್ ಹುಸೀನ್ ಮತ್ತು ಈ ಸ್ಪೋಟದ ಮಾಸ್ಟರ್ ಮೈಂಡ್ ಮತೀನ್ ತಾಹಾ ಎಂಬವರನ್ನು ಬಂಧಿಸಲಾಗಿದೆ. ಇವರು ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡು ಓಡಾಡುತ್ತಿದ್ದರು ಎನ್ನಲಾಗಿದೆ. ಆದರೆ ತೀವ್ರ ಕಾರ್ಯಚರಣೆ ನಡೆಸುತ್ತಿದ್ದ ಎನ್ ಐಎ ಇವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ : 'ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ನಿಲ್ಲಿಸಿ, ಜೆಡಿಎಸ್ ಪಕ್ಷ ಹೇಗೆ ಕಟ್ಟುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ ಒಂದರಂದು ಮಧ್ಯಾಹ್ನ ಸ್ಪೋಟ ಸಂಭವಿಸಿದ್ದು, 10 ಜನ ಗಾಯಗೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯ ಪತ್ತೆಗೆ ಇಲಾಖೆ ಮುಂದಾಗಿತ್ತು. ಎಲ್ಲ ಸಾಕ್ಷ್ಯಗಳನ್ನು ಕಲೆ ಹಾಕಿರುವ ಇಲಾಖೆ ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ : ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.