ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ
ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.
ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು.
ಇದನ್ನೂ ಓದಿ : ನೆನೆಸಿದ ಖರ್ಜೂರ ತಿಂದರೆ ಆರೋಗ್ಯಕ್ಕಿವೆ ಹಲವಾರು ಲಾಭಗಳು..! ತಪ್ಪದೇ ಸೇವಿಸಿ
ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.
ಟಗರು ಪಲ್ಯ ಚಿತ್ರತಂಡದ ಜೊತೆ ಜೀ ಕನ್ನಡ ನ್ಯೂಸ್ ಸಂದರ್ಶನ
ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಎಂದು ಅವರು ಹೇಳಿದ್ದಾರೆ.
ಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ ಎಂದು ಡಿಸಿಎಂ ಡಿಕೆಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.