`ಬಸವಣ್ಣನ ಅನುಯಾಯಿಯ ಹತ್ಯೆಯಾಗಿದೆ`
ಅಂಬೇಡ್ಕರ್ ಸಂವಿಧಾನದ ಮೇಲೆ ಕರ್ನಾಟಕದಲ್ಲಿ ದಾಳಿ ನಡೆಯುತ್ತಿದೆ. ರಾಜ್ಯ ಸರ್ಕಾರದ ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕೊಲೆ ಆರೋಪವಿದೆ. ಬಸವಣ್ಣನ ಮಗನ ಹತ್ಯೆಯಾಗಿದೆ`
ಬೆಂಗಳೂರು: ರಾಜ್ಯದಲ್ಲಿ ಬಸವಣ್ಣನ ಅನುಯಾಯಿಯ ಹತ್ಯೆಯಾಗಿದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಅವರು, "ಅಂಬೇಡ್ಕರ್ ಸಂವಿಧಾನದ ಮೇಲೆ ಕರ್ನಾಟಕದಲ್ಲಿ ದಾಳಿ ನಡೆಯುತ್ತಿದೆ. ರಾಜ್ಯ ಸರ್ಕಾರದ ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕೊಲೆ ಆರೋಪವಿದೆ. ಬಸವಣ್ಣನ ಮಗನ ಹತ್ಯೆಯಾಗಿದೆ. ಸಚಿವರೊಬ್ಬರ ವಿರುದ್ಧ ಕೊಲೆ ಯತ್ನ, ಕೊಲೆಗೆ ಪ್ರಚೋದನೆ ಪ್ರಕರಣ ದಾಖಲಾದರೂ ಹೇಗೆ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರೆ?" ಎಂದು ಪ್ರಶ್ನಿಸಿದರು.
ಇದನ್ನು ಓದಿ: Surya Grahana 2022: ಈ ರಾಶಿಗಳ ಜನರಿಗೆ ಅತ್ಯಂತ ಶುಭವಾಗಿದೆ ಸೂರ್ಯ ಗ್ರಹಣ, ಅಪಾರ ಧನವೃಷ್ಟಿ
"ಸಿಎಂ ಬಸವರಾಜ ಬೊಮ್ಮಾಯಿ ಸಂವಿಧಾನವನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಆರೋಪ ಹೊತ್ತಿರುವ ಸಚಿವ ಈಶ್ವರಪ್ಪ ಅವರನ್ನು ಸಿಎಂ ರಕ್ಷಣೆ ಮಾಡುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತ ಸಚಿವರಿಗೆ ಏಕೆ ರಕ್ಷಣೆ ನೀಡುತ್ತಾರೆ? ಇದು ರಾಜಕೀಯ ಹೋರಾಟ ಅಲ್ಲ, ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಹೋರಾಟವಾಗಿದೆ" ಎಂದು ಹೇಳಿದರು.
ಇದನ್ನು ಓದಿ: GT vs RR: ಗೆಲುವಿನ ಹಾದಿಗೆ ಮರಳಲು ಪಣತೊಟ್ಟ ಟೈಟಾನ್ಸ್‌ಗೆ ರಾಯಲ್ಸ್ ಚಾಲೆಂಜ್!
ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, "ಹೋರಾಟವನ್ನು ದೊಡ್ಡ ಮಟ್ಟದಲ್ಲಿ ಮಾಡಬೇಕಾದ ಅನಿವಾರ್ಯತೆ ಇದ್ದರೂ ಕೋರ್ಟ್ ನಿರ್ಬಂಧವಿದೆ. ಆದರೂ ದೇಶ ಹಾಗೂ ರಾಜ್ಯಕ್ಕೆ ನ್ಯಾಯ ಒದಗಿಸಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೊಗೆಯಬೇಕಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯವಾಗಿದೆ" ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.