ಮತದಾರರ ಮಾಹಿತಿ ಕಳ್ಳತನ ಆರೋಪ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ
ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬೊಮ್ಮಾಯಿಯವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣಾ ಪ್ರಕ್ರಿಯೆಗೂ ವಿಸ್ತರಿಸಿದೆ! ಎಂದು ರಣದೀಪ್ ಸುರ್ಜೇವಾಲಾ ಕಿಡಿಕಾರಿದ್ದಾರೆ.
ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಅಕ್ರಮದ ಹೊಣೆಹೊತ್ತು ಸಿಎಂ ಬಸವರಾಜ ಬೊಮ್ಮಾಯಿಯವರು ಕೂಡಲೇ ರಾಜೀನಾಮೆ ನೀಡಬೇಕೆಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ಚಿಲುಮೆ ಎಜುಕೇಶನ್ ಇನ್ಸ್‌ಟಿಟ್ಯೂಟ್ ಎಂಬ ಸಂಸ್ಥೆಯ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳ್ಳತನ ನಡೆದಿದೆ. ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬೊಮ್ಮಾಯಿಯವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣಾ ಪ್ರಕ್ರಿಯೆಗೂ ವಿಸ್ತರಿಸಿದೆ!’ ಎಂದು ಕಿಡಿಕಾರಿದ್ದಾರೆ.
ಮತದಾರರ ಜಾಗೃತಿ ಹೆಸರಲ್ಲಿ ಬಿಜೆಪಿಯಿಂದ ಡಾಟಾ ಕಳ್ಳತನ: ಕಾಂಗ್ರೆಸ್ ಗಂಭೀರ ಆರೋಪ
‘ಇದು ಅಕ್ರಮದ ಮೂಲಕ ಮತದಾರರ ಸಂವಿಧಾನ ದತ್ತ ಮತದಾನದ ಹಕ್ಕು ಕಸಿಯುವ ಪ್ರಯತ್ನ. ಇದರ ಜವಾಬ್ದಾರಿ ಸಿಎಂ ಬೊಮ್ಮಾಯಿಯವರ ಮೇಲಿದ್ದು, ಅವರು ಈ ಅಕ್ರಮದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಕೂಡಲೇ ಸಿಎಂ ಬೊಮ್ಮಾಯಿಯವರ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಬಂಧಿಸಬೇಕು’ ಎಂದು ಸುರ್ಜೇವಾಲಾ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದವರು ಹತಾಶರಾಗಿದ್ದಾರೆ : ಸಿಎಂ ಬೊಮ್ಮಾಯಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.