"ಕರ್ನಾಟಕದ ಪರಿಸ್ಥಿತಿ ಗಂಭೀರ, ಸಿಎಂ ಜನರನ್ನು ನಡು ನೀರಲ್ಲಿ ಕೈಬಿಟ್ಟಿದ್ದಾರೆ"

ಕರ್ನಾಟಕದಲ್ಲಿ ಪರಿಸ್ಥಿತಿ ಗಂಭೀರವಾಗಿದೆ.ಯಡಿಯೂರಪ್ಪ ಅವರ ಸರ್ಕಾರ ತನ್ನ ಜವಾಬ್ದಾರಿಯಿಂದ ಜಾರಿಕೊಳ್ಲುವ ಮೂಲಕ ಬೆಂಗಳೂರು ಹಾಗೂ ರಾಜ್ಯದ ಜನರನ್ನು ನಡು ನೀರಲ್ಲಿ ಕೈಬಿಟ್ಟಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದಲ್ಲಿ  ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

Last Updated : Apr 27, 2021, 07:20 PM IST
  • ಕರ್ನಾಟಕದಲ್ಲಿ ಪರಿಸ್ಥಿತಿ ಗಂಭೀರವಾಗಿದೆ.ಯಡಿಯೂರಪ್ಪ ಅವರ ಸರ್ಕಾರ ತನ್ನ ಜವಾಬ್ದಾರಿಯಿಂದ ಜಾರಿಕೊಳ್ಲುವ ಮೂಲಕ ಬೆಂಗಳೂರು ಹಾಗೂ ರಾಜ್ಯದ ಜನರನ್ನು ನಡು ನೀರಲ್ಲಿ ಕೈಬಿಟ್ಟಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.
"ಕರ್ನಾಟಕದ ಪರಿಸ್ಥಿತಿ ಗಂಭೀರ, ಸಿಎಂ ಜನರನ್ನು ನಡು ನೀರಲ್ಲಿ ಕೈಬಿಟ್ಟಿದ್ದಾರೆ"  title=
file photo

ನವದೆಹಲಿ: ಕರ್ನಾಟಕದಲ್ಲಿ ಪರಿಸ್ಥಿತಿ ಗಂಭೀರವಾಗಿದೆ.ಯಡಿಯೂರಪ್ಪ ಅವರ ಸರ್ಕಾರ ತನ್ನ ಜವಾಬ್ದಾರಿಯಿಂದ ಜಾರಿಕೊಳ್ಲುವ ಮೂಲಕ ಬೆಂಗಳೂರು ಹಾಗೂ ರಾಜ್ಯದ ಜನರನ್ನು ನಡು ನೀರಲ್ಲಿ ಕೈಬಿಟ್ಟಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದಲ್ಲಿ  ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.ಅವರು ಕೋವಿಡ್ ಪರಿಸ್ಥಿತಿ ಕುರಿತು ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡರ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡುತ್ತಿದ್ದರು 

ದೇಶದ ಐಟಿ ರಾಜಧಾನಿ ಎಂದೇ ಪರಿಗಣಿಸಲ್ಪಟ್ಟಿರುವ ಬೆಂಗಳೂರು ಈಗ ದೇಶದಲ್ಲೇ ಅತಿ ಹೆಚ್ಚು ಕೊರೋನಾ ಸೋಂಕಿತ ನಗರವಾಗಿದೆ ಸೋಂಕಿತರಿಗೆ ಹಾಸಿಗೆ, ಆಕ್ಸಿಜನ್, ಔಷಧಿ, ಆಂಬುಲೆನ್ಸ್, ವೈದ್ಯಕೀಯ ಸೇವೆ ಪೂರೈಸುವಲ್ಲಿ ಮಾತ್ರವಲ್ಲ ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಲು ಅವಕಾಶ ನೀಡಲು ಸರ್ಕಾರ ವಿಫಲವಾಗಿದೆ. ಇದು ರಾಜ್ಯದ ಜನರಿಗೆ ಬಿಜೆಪಿ ಸರ್ಕಾರ ಬಗೆದಿರುವ ದ್ರೋಹ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೈವ್ ಸ್ಟಾರ್ ಹೋಟೆಲ್‌ನಲ್ಲಿ 100 ಬೆಡ್ ಗಳ ಸೌಲಭ್ಯವನ್ನು ಕೇಳಿಲ್ಲ-ದೆಹಲಿ ಹೈಕೋರ್ಟ್

ಈ ಸಂದರ್ಭದಲ್ಲಿ ರಾಜ್ಯದ ಜನರ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷ ಹೊತ್ತಿದೆ. ಹೀಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಕಂಟ್ರೋಲ್ ರೂಮ್ ಹಾಗೂ ಸಹಾಯವಾಣಿ ಆರಂಭಿಸಬೇಕು.ಆ ಮೂಲಕ ಜನರಿಗೆ ಆಂಬುಲೆನ್ಸ್ ಹಾಗೂ ಇತರೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು. ಕೋವಿಡ್ ನಿರ್ಬಂಧದಿಂದ ತೊಂದರೆ ಅನುಭವಿಸುತ್ತಿರುವ ಪ್ರತಿ ಮನೆಗಳಿಗೂ ಆಹಾರ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ಆಕ್ಸಿಜನ್ ಪೂರೈಕೆ ಹಾಗೂ ರೆಮಡಿಸಿವಿಯರ್, ಪ್ಯಾರಸಿಟಮಲ್ ಹಾಗೂ ಇತರೆ ಔಷಧಿಗಳು ಅಗತ್ಯ ರೋಗಿಗಳಿಗೆ ಸಿಗುವಂತೆ ಮಾಡಬೇಕು ಎಂದು ರಣದೀಪ್ ಸಿಂಗ್ ಸುರ್ಜೇವಾಲ (Randeep Surjewala) ಸಲಹೆ ನೀಡಿದರು.

ಇದನ್ನೂ ಓದಿ: Karuna Shukla : ಕಾಂಗ್ರೆಸ್ ಹಿರಿಯ ನಾಯಕಿ ಕೊರೋನಾಗೆ ಬಲಿ..!

ಕಾಂಗ್ರೆಸ್ ಪಕ್ಷದ ಜತೆ ಇರುವ ವೈದ್ಯರಿಂದ ಸೋಂಕಿತರಿಗೆ ಅಗತ್ಯ ವೈದ್ಯಕೀಯ ಮಾರ್ಗದರ್ಶನ ನೀಡಬೇಕು. ವೈದ್ಯರಿಗೆ ಪಿಪಿಇ ಕಿಟ್, ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ತಿಳಿಸಿದ್ದಾರೆ. ಇನ್ನು ಎಲ್ಲೆಲ್ಲಿ ಸೋಂಕಿತರಿಗೆ ಹಾಸಿಗೆ ಸಿಗುತ್ತಿಲ್ಲವೋ, ಅಲ್ಲೆಲ್ಲ ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಕಲ್ಪಿಸಿ, ಆಮ್ಲಜನಕ ಪೂರೈಕೆ ಮಾಡಬೇಕು. ಈ ಎಲ್ಲವನ್ನು ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಆರಂಭಿಸಬೇಕು ಮನವಿ ಮಾಡಿದರು.

ಇದನ್ನೂ ಓದಿ: SC Asks For National Plan - 'ರಾಷ್ಟ್ರೀಯ ವಿಪತ್ತಿನ ಪರಿಸ್ಥಿತಿಯಲ್ಲಿ ಮೂಕ ಪ್ರೇಕ್ಷಕನಾಗಲು ಸಾಧ್ಯವಿಲ್ಲ

ದಿನಗೂಲಿ ನೌಕರರು, ವ್ಯಾಪಾರಿಗಳಿಗೆ, ಚಾಲಕರಿಗೆ ಆಗುತ್ತಿರುವ ನಷ್ಟಕ್ಕೆ ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಬೇಕು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಮುಖ್ಯಮಂತ್ರಿಗಳಿಗೆ ಧ್ವನಿ ಎತ್ತಬೇಕು. ಲಸಿಕೆ ಪೂರೈಕೆ ವಿಚಾರದಲ್ಲೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಎಲ್ಲ ಜನರಿಗೆ ಲಸಿಕೆ ಉಚಿತವಾಗಿ ಶೀಘ್ರ ಸಿಗುವಂತೆ  ಆಗ್ರಹಿಸಬೇಕು. ಈ ವಿಚಾರಗಳನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ-RBI Alert! ದೇಶಾದ್ಯಂತ ಹಣದುಬ್ಬರ ಹೆಚ್ಚಾಗಲಿದೆ, ಕಾರಣ ಇಲ್ಲಿದೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News