ಬೆಳಗಾವಿ: ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಅತ್ಯಾಚಾರದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈಗ ತಮ್ಮ ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು "ಅತ್ಯಾಚಾರ ಕುರಿತು ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಹೇಳಿಕೆಗಾಗಿ ನಾನು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನನ್ನ ಉದ್ದೇಶವು ಕ್ಷುಲ್ಲಕಗೊಳಿಸುವುದು ಅಥವಾ ಘೋರ ಅಪರಾಧವನ್ನು ಹಗುರಗೊಳಿಸುವುದು ಅಲ್ಲ, ಆದರೆ ಅದನ್ನು ತಕ್ಷಣ ಹೇಳಿದ್ದು, ನಾನು ಇನ್ನು ಮುಂದೆ ನನ್ನ ಪದಗಳನ್ನು ಎಚ್ಚರಿಕೆಯಿಂದ ಆರಿಸುತ್ತೇನೆ" ಎಂದು ಅವರು ಕ್ಷಮೆಕೋರಿದ್ದಾರೆ.
ಇದನ್ನೂ ಓದಿ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಗುರುವಾರದಂದು ವಿಧಾನಸಭೆಯಲ್ಲಿ, ಅತ್ಯಾಚಾರ ಅನಿವಾರ್ಯವಾದಾಗ, ಮಲಗಿ ಅದನ್ನು ಆನಂದಿಸಬೇಕು ಎನ್ನುವ ಹೇಳಿಕೆಯನ್ನು ನೀಡಿದ್ದರು.
I would like to express my sincere apologies to everyone for the indifferent and negligent comment I made in today’s assembly about “Rape!” My intention was not trivialise or make light of the heinous crime, but an off the cuff remark! I will choose my words carefully henceforth!
— K. R. Ramesh Kumar (@KRRameshKumar1) December 16, 2021
ಸದನದ ಸದಸ್ಯರು ರೈತರ ಸಮಸ್ಯೆಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿದಾಗ ಅವರ ಬೇಡಿಕೆಗೆ ಸ್ಪಂದಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಎಲ್ಲರಿಗೂ ಮಾತನಾಡಲು ಸಮಯ ನೀಡಿದರೆ ಸದನ ನಡೆಸುವುದು ಹೇಗೆ? ಎಂದು ಪ್ರಶ್ನಿಸಿದರು. ಈ ಬಗ್ಗೆ ನಿರ್ಧರಿಸುವಂತೆ ಶಾಸಕರನ್ನು ಕೋರಿದ ಅವರು, ರಮೇಶ್ ಕುಮಾರ್ ಅವರಿಗೆ , "ನಾನು ಇದನ್ನು ನಿಯಂತ್ರಣದಲ್ಲಿಟ್ಟುಕೊಂಡು ವ್ಯವಸ್ಥಿತವಾಗಿ ಮುನ್ನಡೆಸಲು ಸಾಧ್ಯವಿಲ್ಲ" ಎಂದು ಹೇಳಿದ್ದರು.
ಇದನ್ನೂ ಓದಿ: KR Ramesh Kumar: 'ರಾಮಮಂದಿರ ಕಟ್ಟಿದರೆ ಸಾಕು ಎನ್ನುವವರಿಗೆ ದೇಶ ಬಿಟ್ಟಿದ್ದೇವೆ'
ಆಗ ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕುಮಾರ್ ಅವರು“ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಬೇಕು ಎನ್ನುವ ಮಾತಿದೆ ಆ ಸ್ಥಿತಿ ನಿಮ್ಮದಾಗಿದೆ"ಎಂದು ಹೇಳಿದರು. ಆದರೆ ಸದನದಲ್ಲಿ ರಮೇಶ್ ಕುಮಾರ್ ಅವರ ಮಾತಿಗೆ ಯಾರು ಕೂಡ ಪ್ರತಿರೋಧ ವ್ಯಕ್ತಪಡಿಸದೆ ಸದಸ್ಯರೆಲ್ಲರೂ ಸಹ ನಕ್ಕು ಸುಮ್ಮನಾಗಿದ್ದರು. ಆದರೆ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ರಮೇಶ್ ಕುಮಾರ್ ಅವರ ಹೇಳಿಕೆಗೆ ಭಾರಿ ಪ್ರತಿರೋಧ ವ್ಯಕ್ತವಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ