ಬೆಳಗಾವಿ: ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಅತ್ಯಾಚಾರದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈಗ ತಮ್ಮ ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು "ಅತ್ಯಾಚಾರ ಕುರಿತು ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಹೇಳಿಕೆಗಾಗಿ ನಾನು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನನ್ನ ಉದ್ದೇಶವು ಕ್ಷುಲ್ಲಕಗೊಳಿಸುವುದು ಅಥವಾ ಘೋರ ಅಪರಾಧವನ್ನು ಹಗುರಗೊಳಿಸುವುದು ಅಲ್ಲ, ಆದರೆ ಅದನ್ನು ತಕ್ಷಣ ಹೇಳಿದ್ದು, ನಾನು ಇನ್ನು ಮುಂದೆ ನನ್ನ ಪದಗಳನ್ನು ಎಚ್ಚರಿಕೆಯಿಂದ ಆರಿಸುತ್ತೇನೆ" ಎಂದು ಅವರು ಕ್ಷಮೆಕೋರಿದ್ದಾರೆ.


ಇದನ್ನೂ ಓದಿ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್


ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಗುರುವಾರದಂದು ವಿಧಾನಸಭೆಯಲ್ಲಿ, ಅತ್ಯಾಚಾರ ಅನಿವಾರ್ಯವಾದಾಗ, ಮಲಗಿ ಅದನ್ನು ಆನಂದಿಸಬೇಕು ಎನ್ನುವ ಹೇಳಿಕೆಯನ್ನು ನೀಡಿದ್ದರು.


KR Ramesh Kumar: 'ರಾಮಮಂದಿರ ಕಟ್ಟಿದರೆ ಸಾಕು ಎನ್ನುವವರಿಗೆ ದೇಶ ಬಿಟ್ಟಿದ್ದೇವೆ'


ಆಗ ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕುಮಾರ್ ಅವರು“ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಬೇಕು ಎನ್ನುವ ಮಾತಿದೆ ಆ ಸ್ಥಿತಿ ನಿಮ್ಮದಾಗಿದೆ"ಎಂದು ಹೇಳಿದರು. ಆದರೆ ಸದನದಲ್ಲಿ ರಮೇಶ್ ಕುಮಾರ್ ಅವರ ಮಾತಿಗೆ ಯಾರು ಕೂಡ ಪ್ರತಿರೋಧ ವ್ಯಕ್ತಪಡಿಸದೆ ಸದಸ್ಯರೆಲ್ಲರೂ ಸಹ ನಕ್ಕು ಸುಮ್ಮನಾಗಿದ್ದರು. ಆದರೆ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ರಮೇಶ್ ಕುಮಾರ್ ಅವರ ಹೇಳಿಕೆಗೆ ಭಾರಿ ಪ್ರತಿರೋಧ ವ್ಯಕ್ತವಾಯಿತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ