ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ. ಸರ್ಕಾರವನ್ನು ಬಲಪಡಿಸಲು ಸಚಿವ ಸ್ಥಾನವನ್ನೂ ತ್ಯಾಗ ಮಾಡಲು ನಾವು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಸೋಮವಾರ ಹೇಳಿದರು.
ಇಂದು ಬೆಳಿಗ್ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಸರ್ಕಾರವನ್ನು ಬಲಪಡಿಸಲು ಸಚಿವ ಸ್ಥಾನವನ್ನೂ ತ್ಯಾಗ ಮಾಡಲು ನಾವು ಸಿದ್ಧರಿದ್ದೇವೆ. ಸರ್ಕಾರದ ಹಿತದೃಷ್ಟಿಯಿಂದ ಎಲ್ಲ ತ್ಯಾಗಕ್ಕೂ ಸಿದ್ಧರಿದ್ದೇವೆ. ಮುಖ್ಯಮಂತ್ರಿ ಕಾಂಗ್ರೆಸ್ ಪಕ್ಷ ಬಲಪಡಿಸಲು ನಾವು ಬದ್ಧ ಎಂದು ತಿಳಿಸಿದರು.
ವಿಧಾನಸಭೆಯಲ್ಲಿ ಅಗತ್ಯವಿರುವ ಬಹುಮತಕ್ಕಿಂತ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರವು ಕಡಿಮೆ ಬಲ ಹೊಂದಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಸರ್ಕಾರಕ್ಕೆ ಬಹುಮತದ ಕೊರತೆ ಇಲ್ಲ ಎಂದರು.