Heart Attack: ಹಾಸನ ಜಿಲ್ಲೆಯಲ್ಲಿ ಕಳೆದ ಒಂದೇ ಒಂದು ತಿಂಗಳಿನಲ್ಲಿ ಸುಮಾರು 18 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈ ಬಗ್ಗೆ 10ದಿನಗಳಲ್ಲಿ ವರದಿ ಸಲ್ಲಿಸುವಂತೆ ಕೋರಲಾಗಿದೆ.

Heart Attack: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ, ಅತಿ ಸಣ್ಣ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದೆ. ಕಳೆದ ಒಂದು ತಿಂಗಳಿನಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸುಮಾರು 18 ಮಂದಿ ಮೃತಪಟ್ಟಿದ್ದು ಎಲ್ಲರನ್ನೂ ಬೆಚ್ಚಿಬೀಳುವಂತೆ ಮಾಡಿದೆ.
ಈ ಬಗ್ಗೆ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳದ ಬಗ್ಗೆ ತನಿಖೆಗಾಗಿ ಟೆಕ್ನಿಕಲ್ ಕಮಿಟಿ ರಚಿಸಿದೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು Hassan institute of medical science ಸಹಯೋಗದೊಂದಿಗೆ 10 ದಿನದಲ್ಲಿ ವರದಿ ಸಲ್ಲಿಕೆಗೆ ಸೂಚನೆ ನೀಡಿದೆ.
ಹಾಸನದ ಹೃದಯಘಾತಕ್ಕೆ ಅಸಲಿ ಕಾರಣ ಏನು ..?
ಹಾಸನ ತಾಲ್ಲೂಕ ಆಸ್ಪತ್ರೆಗಳಲ್ಲಿ ಹಬ್ ಅ್ಯಂಡ್ ಸ್ಪೋಕ್ ಮಾಡಲ್ ಇಲ್ಲದಿರುವುದೇ ಪ್ರಮುಖ ಕಾರಣವಿರಬಹುದು ಎನ್ನಲಾಗುತ್ತಿದೆ.
ಹಬ್ ಅ್ಯಂಡ್ ಸ್ಪೋಕ್ ಮಾಡಲ್ ನಲ್ಲಿ ಸ್ಟೆಮಿ ಯೋಜನೆ ಜಾರಿ ಮಾಡಲಾಗಿದೆ. ಆದರೆ, ಜಿಲ್ಲೆಯಲ್ಲಿ 'ಸ್ಟೆಮಿ ಯೋಜನೆ' ಇಲ್ಲದಿರುವುದೇ ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳಕ್ಕೆ ಕಾರಣ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.
ಏನಿದು ಸ್ಟೆಮಿ ಯೋಜನೆ..?
ಸ್ಟೆಮಿ ಯೋಜನೆಯು ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ಯೋಜನೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದಡಿ ರಾಜ್ಯದ 86 ತಾಲ್ಲೂಕು ಆಸ್ಪತ್ರೆಗಳಲ್ಲಿ ಸರ್ಕಾರ ಸ್ಟೆಮಿ ಯೋಜನೆಯನ್ನು ಜಾರಿಗೆ ತಂದಿದೆ.
ತುರ್ತು ಚಿಕಿತ್ಸಾ ವಿಭಾಗದಲ್ಲಿ ಹೃದಯಾಘಾತಕ್ಕೆ ತ್ವರಿತ ಚಿಕಿತ್ಸೆಗೆ ಸ್ಟೆಮಿ ಸಹಾಯಕವಾಗಿದ್ದು ರೋಗಿಗಳು ಎದೆನೋವು ಎಂದು ಆಸ್ಪತ್ರೆಗೆ ಬಂದಾಗ ಅವರಿಗೆ ಮೊದಲು ಇಸಿಜಿ ಮಾಡಿ ಮಾಹಿತಿಯನ್ನು ಜಯದೇವ ಹೃದ್ರೋಗ ಹಬ್ಗೆ ರವಾನಿಸಲಾಗುತ್ತದೆ. ಅಲ್ಲಿನ ನುರಿತ ವೈದ್ಯರು ಕಾಯಿಲೆ ಗುರುತಿಸಿ, ಚಿಕಿತ್ಸೆ ಕುರಿತು ತಾಲ್ಲೂಕ ವೈದ್ಯರಿಗೆ ಮಾರ್ಗದರ್ಶನ ನೀಡುತ್ತಾರೆ.
ನಂತರ ಹೆಚ್ಚಿನ ಚಿಕಿತ್ಸೆಗೆ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡುವುದಾಗಿದೆ.
ಸದ್ಯ ಈ ಯೋಜನೆಯನ್ನ ಹಾಸನದಲ್ಲಿ ಎಫೆಕ್ಟಿವ್ ಆಗಿ ಜಾರಿಗೆ ಮಾಡಬೇಕು. ಹಾಸನದ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಕ್ರಿಯವಾಗಿ ಈ ಯೋಜನೆಯನ್ನು ಜಾರಿ ಮಾಡುವುದರಿಂದ ಹೃದಯಘಾತದ ಸಾವಿನ ಪ್ರಮಾಣ ಕಡಿಮೆ ಮಾಡಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.