ಬೆಂಗಳೂರು: ಅತೃಪ್ತ ಶಾಸಕರಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಕರಾಳ ಅಧ್ಯಾಯವೊಂದು ಸೃಷ್ಟಿಯಾಗಿದೆ ಎಂದು ಡಾ.ಜಿ. ಪರಮೇಶ್ವರ್ ಅತೃಪ್ತ ಶಾಸಕರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಡಾ. ಜಿ. ಪರಮೇಶ್ವರ್, ಅತೃಪ್ತರನ್ನು ಮತ್ತೆ ಮನವೊಲಿಸುವ ಪ್ರಶ್ನೆಯೇ ಇಲ್ಲ. ಇವರಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಕರಾಳ ಅಧ್ಯಾಯವೊಂದು ಸೃಷ್ಟಿಯಾಗಿದೆ. ದ್ರೋಹ ಬಗೆದ ಅವರನ್ನು ಅನರ್ಹಗೊಳಿಸಬೇಕು ಎಂದು ವಿಧಾನಸಭೆಯ ಅಧ್ಯಕ್ಷರಿಗೆ ಮನವಿ ಮಾಡಿಕೊಂಡಿದ್ದೇವೆ. ಎಲ್ಲಾ ಆಗುಹೋಗುಗಳನ್ನು ಸಭಾಧ್ಯಕ್ಷರು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಎಂದಿದ್ದಾರೆ.



ಇದಕ್ಕೂ ಮೊದಲು ಒಂದು ಟ್ವೀಟ್ ಮಾಡಿದ್ದ ಪರಮೇಶ್ವರ್, ಇದ್ದ ಸರ್ಕಾರವನ್ನು ಬೀಳಿಸುವುದೂ ಅನೈತಿಕವಾಗಿ. ಸಹಜ ಬಹುಮತವಿಲ್ಲದೆ ಸರ್ಕಾರ ರಚಿಸುವುದೂ ಅನೈತಿಕವಾಗಿ. ಬಿಜೆಪಿಯವರಿಗೆ ನೈತಿಕವಾಗಿ ಏನನ್ನೂ ಮಾಡುವುದಕ್ಕೆ ಬರುವುದೇ ಇಲ್ಲವೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ಕಳೆದ ಎರಡು ದಶಕಗಳಲ್ಲಿ ಸರಕಾರಗಳನ್ನು ಅಸ್ಥಿರಗೊಳಿಸುವುದೇ ಕರ್ನಾಟಕಕ್ಕೆ ಬಿಜೆಪಿ ನೀಡಿರುವ ಕೊಡುಗೆ ಎಂದು ಮತ್ತೆ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ವಿರುದ್ಧವೂ ವಾಗ್ಧಾಳಿ ನಡೆಸಿದ್ದಾರೆ.