ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ (ಕ್ಲಾಸ್-31)ಪ್ರಮಾಣಪತ್ರ ದೊರೆತಿದ್ದು, ಇದಕ್ಕೆಶೇ.20-25 ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿ ಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು (Commission for Agriculture Crops and Prices- CACP) ಕೋರಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನಕರ್ನಾಟಕ ವಿಧಾನ ಪರಿಷತ್ತನ್ನು ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರರವರ ನಿಯಮ 72ರ ಮೇರೆಗಿನ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿ ಕೃಷಿ ಸಚಿವರು ಈ‌ ಮಾಹಿತಿ ನೀಡಿದರು.


ಇದನ್ನೂ ಓದಿ :  ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದ ನಿಖಿಲ್ ಕುಮಾರಸ್ವಾಮಿ


ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ಕೃಷಿ ವೆಚ್ಚ ಮತ್ತು ಬೆಲೆ ಆಯೋಗವು(Commission on Agriculture Costs and Prices-CACP) ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿವಿಧ ರಾಜ್ಯಗಳಲ್ಲಿ ಉತ್ಪಾದನಾ ವೆಚ್ಚ ವಿವರಗಳನ್ನು ಕೃಷಿ ವಿಶ್ವವಿದ್ಯಾನಿಲಯಗಳ ಸಹಯೋಗದಲ್ಲಿ ಲೆಕ್ಕಾಚಾರಮಾಡುತ್ತದೆ. ಜೊತೆಗೆ ಎಲ್ಲಾ ರಾಜ್ಯ ಸರ್ಕಾರಗಳಿಂದ ಬೆಳೆಗಳ ಉತ್ಪಾದನಾ ವೆಚ್ಚದ ಮಾಹಿತಿ ಪಡೆದು, ತಜ್ಞರು, ಅಧಿಕಾರಿಗಳು ಮತ್ತು ರೈತರೊಂದಿಗೆ ಚರ್ಚಿಸಿ, ಉತ್ಪಾದನಾ ವೆಚ್ಚ ವಿವರಗಳನ್ನು ಒಳಗೊಂಡ ಬೆಲೆ ನೀತಿ ವರದಿಯನ್ನು ತಯಾರಿಸಲಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದರು.


ವರದಿ, ಶಿಫಾರಸ್ಸುಗಳಿಗೆ ಸಂಬಂಧಿಸಿದಂತೆ ರಾಜ್ಯಗಳ ಅಭಿಪ್ರಾಯ ಪಡೆದು,ನಂತರ ಉತ್ಪಾದನಾ ವೆಚ್ಚದ ಮೇಲೆ ಶೇ.50 ರಷ್ಟು ಸೇರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ. CACP ಶಿಫಾರಸ್ಸಿನನ್ವಯ ಕೇಂದ್ರ ಸರ್ಕಾರವು ಬೆಂಬಲ ಬೆಲೆಯನ್ನು ಘೋಷಿಸುತ್ತದೆ ಎಂದು ಎನ್ ಚಲುವರಾಯಸ್ವಾಮಿ ವಿವರಿಸಿದರು.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.


ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಪ್ರತಿವರ್ಷ ತೊಗರಿ ಬೆಳೆಗೆ ಹೆಚ್ಚಿನ ಬೆಂಬಲ ಬೆಲೆಗೆ ಶಿಫಾರಸ್ಸು ಮಾಡಲಾಗುತ್ತಿದೆ. ಅದರ ಅನ್ವಯದಂತೆ ವಿವಿಧ ಮಾನದಂಡಗಳನ್ನು ಅನುಸರಿಸಿ ಬೆಂಬಲ ಬೆಲೆ ನಿಗಧಿಯಾಗಲಿದೆ ಎಂದು  ಕೃಷಿ ಸಚಿವರು ವರ್ಷವಾರು  ಅಂಕಿ ಅಂಶಗಳೊಂದಿಗೆ  ಮಾಹಿತಿ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.