ವರ್ಷದ ಕೊನೆ ದಿನ ದಾಖಲೆಯ ಮದ್ಯ ಮಾರಾಟ: ಒಂದೇ ದಿನದಲ್ಲಿ 18.85 ಕೋಟಿ ರೂ. ವಹಿವಾಟು
New Year liquor sales: ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಇದು ಸುಮಾರು 4.34 ಕೋಟಿ ರೂ.ಹೆಚ್ಚಳವಾಗಿದೆ. 2022ರ ಡಿ. 31ರಂದು 14.51 ಕೋಟಿ ರೂ. ಮೊತ್ತದ ಮದ್ಯ ಮಾರಾಟವಾಗಿತ್ತು ಎಂದು ಅವರು ಹೇಳಿದ್ದಾರೆ.
New Year liquor sales: ಬೆಂಗಳೂರು: ರಾಜ್ಯದಲ್ಲಿರುವ 1031 ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗಳಲ್ಲಿ 2023ರ ಕೊನೆಯ ದಿನವಾದ ಭಾನುವಾರ (ಡಿಸೆಂಬರ್ 31) 18.85 ಕೋಟಿ ರೂ. ಮೊತ್ತದ ದಾಖಲೆಯ ಮದ್ಯ ಮಾರಾಟವಾಗಿದೆ ಎಂದು ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಬಂಗಾರದ ಈ ವಸ್ತುಗಳು ಯಾವತ್ತೂ ಕಳೆದು ಹೊಗಲೇ ಬಾರದು! ಬಂಗಾರ ಕಳೆದುಕೊಂಡರೆ ಹೀಗೆ ಮಾಡಿ !
ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಇದು ಸುಮಾರು 4.34 ಕೋಟಿ ರೂ.ಹೆಚ್ಚಳವಾಗಿದೆ. 2022ರ ಡಿ. 31ರಂದು 14.51 ಕೋಟಿ ರೂ. ಮೊತ್ತದ ಮದ್ಯ ಮಾರಾಟವಾಗಿತ್ತು ಎಂದು ಅವರು ಹೇಳಿದ್ದಾರೆ.
ರಾಯಚೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಮಳಿಗೆಯಲ್ಲಿ ಅತ್ಯಂತ ಹೆಚ್ಚು, ಅಂದರೆ 11.66 ಲಕ್ಷ ರೂಪಾಯಿಗಳ ಮದ್ಯ ಮಾರಾಟವಾಗಿದ್ದರೆ, ಅದೇ ನಗರದ ಗಂಝ್ ರಸ್ತೆಯ ಮಳಿಗೆಯಲ್ಲಿ 9.96 ಲಕ್ಷದ ಮದ್ಯ ಬಿಕರಿಯಾಗಿ ಎರಡನೇ ಸ್ಥಾನದಲ್ಲಿದೆ. ಜಿಲ್ಲಾವಾರು ಮಾರಾಟದಲ್ಲಿ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ, ಅಂದರೆ 1.82 ಕೋಟಿಯ ಮದ್ಯ ಮಾರಾಟ ಕಂಡಿದೆ. ಕಳೆದ ವರ್ಷದ ಇದೇ ದಿನ ಈ ಜಿಲ್ಲೆಯಲ್ಲಿ ರೂ 1.35 ಕೋಟಿಯ ಮದ್ಯ ಮಾರಾಟವಾಗಿತ್ತು.
ಉನ್ನತ ದರ್ಜೆಗೇರಿಸಿ ಜ.1ರಂದು ಉದ್ಘಾಟನೆಗೊಂಡ ಬೆಂಗಳೂರು ಬಸವೇಶ್ವರನಗರದ ಎಂ ಎಸ್ ಐ ಎಲ್ ಬೋಟಿಕ್ ನಲ್ಲಿ ಭಾನುವಾರ ಆದ ಮದ್ಯ ಮಾರಾಟದ ಮೊತ್ತ ರೂ 3.5 ಲಕ್ಷ. ಇಲ್ಲಿ ಕಳೆದ ವರ್ಷದ ಇದೇ ದಿವಸ ಈ ಮಳಿಗೆಯಲ್ಲಿ ರೂ. 2.59 ಲಕ್ಷದ ಮದ್ಯ ಮಾರಾಟವಾಗಿತ್ತು ಎಂದು ಮನೋಜ್ ಹೇಳಿದ್ದಾರೆ.
ಇದನ್ನೂ ಓದಿ: 2024ರ ಟಿ20 ವಿಶ್ವಕಪ್’ನಲ್ಲಿ ಯಾರಿಲ್ಲದಿದ್ದರೂ ಈ ನಾಲ್ವರು ಇದ್ದೇ ಇರ್ತಾರೆ… ಇವರಿಗೆ ಸ್ಥಾನ ಖಚಿತ!
ಉಳಿದ ದಿನಗಳಂದು ರಾಜ್ಯದ ಎಲ್ಲಾ ಎಂಎಸ್ಐಎಲ್ ಮಳಿಗೆಗಳಿಂದ ಆಗುವ ಮದ್ಯ ಮಾರಾಟದ ವಹಿವಾಟು ರೂ 8 ಕೋಟಿಯಷ್ಟಿರುತ್ತದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರಂದು ಇದು ರೂ 18.8 ಕೋಟಿಗೆ ಏರಿಕೆಯಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ