Karnataka Health Promotion Trust : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಜಿಲ್ಲಾ ಪ್ರೋಗ್ರಾಮ್ ಕೋಆರ್ಡಿನೇಟರ್​.ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜಿಲ್ಲಾ ಪ್ರೋಗ್ರಾಮ್ ಕೋಆರ್ಡಿನೇಟರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು. 


COMMERCIAL BREAK
SCROLL TO CONTINUE READING

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 29, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಉದ್ಯೋಗದ ಸ್ಥಳ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ವೇತನ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.


ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಕಳುಹಿಸಬೇಕು.


ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ