ಜುಲೈ.30 ರೊಳಗೆ ಹೋಂ-ಸ್ಟೇಗಳ ನೋಂದಣಿ ಕಡ್ಡಾಯ

-ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಜುಲೈ, 30 ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. 

Written by - Manjunath N | Last Updated : Jul 8, 2023, 12:01 PM IST
  • ಹೋಂ-ಸ್ಟೇನಲ್ಲಿರುವ ಸಿ.ಸಿ.ಟಿವಿಯ 45 ದಿನಗಳ ಪುಟೇಜ್‍ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು
  • ಹಾರಂಗಿ ಹಿನ್ನೀರಿನ ಹಾಗೂ ಬಾಕ್ ವಾಟರ್ ಹಾಗೂ ಕಾವೇರಿ ನದಿ ದಂಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಮಳೆಗಾಲ ಸಮಯದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು
  • ಈ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ್ ಉಲ್ಲಾಳ್ ಅವರು ತಿಳಿಸಿದ್ದಾರೆ
ಜುಲೈ.30 ರೊಳಗೆ ಹೋಂ-ಸ್ಟೇಗಳ ನೋಂದಣಿ ಕಡ್ಡಾಯ title=
ಸಾಂದರ್ಭಿಕ ಚಿತ್ರ

ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಜುಲೈ, 30 ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. 

ಹೋಂ-ಸ್ಟೇ ನೋಂದಣಿಗೆ ನಿಗಧಿಪಡಿಸಲಾಗಿರುವ  ದಿನಾಂಕದೊಳಗೆ ನೋಂದಣಿ ಮಾಡಿಕೊಳ್ಳದ ಹೋಂ-ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ ಉಲ್ಲಾಳ ಅವರು ತಿಳಿಸಿದ್ದಾರೆ.

2015-20ನೇ ಸಾಲಿನಲ್ಲಿ ಹೋಂ-ಸ್ಟೇ ನಡೆಸಲು ಪರವಾನಿಗೆ ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸಬೇಕು ಹಾಗೂ ಹೋಂ-ಸ್ಟೇಗಳ ನೋಂದಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ಜಾಲ ತಾಣ http://karnatakatourism.org/  ಅಥವಾ https://kttf.karnatakatourism.org/ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಿದೆ.

ಆನ್‍ಲೈನ್‍ನಲ್ಲಿ ಹೋಂ-ಸ್ಟೇ ನೋಂದಣಿ ಮಾಡಲು ಭಾವಚಿತ್ರ, ಆಧಾರ್ ಕಾರ್ಡ್, ಹೋಂ-ಸ್ಟೇ ಹೊರಾಂಗಣ, ಒಳಾಂಗಣ, ಕೊಠಡಿ ಛಾಯಾಚಿತ್ರಗಳು, ಹೋಂ-ಸ್ಟೇ ಮಾಲೀಕತ್ವದ ದಾಖಲಾತಿ, ಪೊಲೀಸ್ ಇಲಾಖೆಯಿಂದ ನೀಡಲಾಗಿರುವ ನಿರಾಕ್ಷೇಪಣಾ ಪತ್ರ, ಸ್ಥಳೀಯ ಸಂಸ್ಥೆಯವರುಗಳು ನೀಡಿರುವ ನಿರಾಕ್ಷೇಪಣಾ ಪತ್ರ. ವಾಸಸ್ಥಳ ದೃಢೀಕರಣ ಪತ್ರ, ನೋಂದಣಿ ಶುಲ್ಕ ರೂ.500 ಗಳ ಸ್ಕ್ಯಾನ್ ಮಾಡಿದ ದಾಖಲಾತಿಗಳನ್ನು ಅಂತರ್ಜಾಲ ತಾಣದಲ್ಲಿ ಅಪ್‍ಲೋಡ್ ಮಾಡಬೇಕು. 

ಇದನ್ನೂ ಓದಿ: ಬಸದಿಯಿಂದ ನಾಪತ್ತೆಯಾಗಿದ್ದ ʼಜೈನ ಮುನಿʼ ಬರ್ಬರ ಹತ್ಯೆ..!

ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕ್ರಮ ಜರುಗಿಸಲಾಗುವುದು ಎಚ್ಚರಿಸಿದ್ದಾರೆ.ಈಗಾಗಲೇ ಪರವಾನಿಗೆ ಪಡೆದು ಹೋಂ-ಸ್ಟೇ ನಡೆಸುತ್ತಿರುವ ಮಾಲೀಕರು ಬರುವಂತಹ ಅತಿಥಿಗಳ ವಾಹನ ಸಂಖ್ಯೆ, ಗುರುತಿನ ಚೀಟಿಯ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು. ಹೋಂ-ಸ್ಟೇಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಅನಧಿಕೃತ ಚಟುವಟಿಕೆಗಳನ್ನು ನಡೆಸಬಾರದು. ಹೋಂ-ಸ್ಟೇಗಳಲ್ಲಿ ಬಳಸುವಂತಹ ಗ್ಯಾಸ್ ಗೀಸರ್/ ಕರೆಂಟ್ ಗೀಸರ್‍ಗಳನ್ನು ಕಾಲಕಾಲಕ್ಕೆ ಸರಿಯಾಗಿ ನಿರ್ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಹೋಂ-ಸ್ಟೇನಲ್ಲಿ ಅಳವಡಿಸುವುದು. 

ಹೋಂ-ಸ್ಟೇನಲ್ಲಿರುವ ಸಿ.ಸಿ.ಟಿವಿಯ 45 ದಿನಗಳ ಪುಟೇಜ್‍ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾರಂಗಿ ಹಿನ್ನೀರಿನ ಹಾಗೂ ಬಾಕ್ ವಾಟರ್ ಹಾಗೂ ಕಾವೇರಿ ನದಿ ದಂಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಮಳೆಗಾಲ ಸಮಯದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು. ಈ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ್ ಉಲ್ಲಾಳ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಿತ್ತೂರು ಕರ್ನಾಟಕ ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿ

ಇವುಗಳಲ್ಲದೇ ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಈ-ಮೇಲ್ : adkodagutourism@gmail.com ಗೆ ತಿಳಿಸಬಹುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News