ಜುಲೈ.30 ರೊಳಗೆ ಹೋಂ-ಸ್ಟೇಗಳ ನೋಂದಣಿ ಕಡ್ಡಾಯ
-ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಜುಲೈ, 30 ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಜುಲೈ, 30 ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
ಹೋಂ-ಸ್ಟೇ ನೋಂದಣಿಗೆ ನಿಗಧಿಪಡಿಸಲಾಗಿರುವ ದಿನಾಂಕದೊಳಗೆ ನೋಂದಣಿ ಮಾಡಿಕೊಳ್ಳದ ಹೋಂ-ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ ಉಲ್ಲಾಳ ಅವರು ತಿಳಿಸಿದ್ದಾರೆ.
2015-20ನೇ ಸಾಲಿನಲ್ಲಿ ಹೋಂ-ಸ್ಟೇ ನಡೆಸಲು ಪರವಾನಿಗೆ ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸಬೇಕು ಹಾಗೂ ಹೋಂ-ಸ್ಟೇಗಳ ನೋಂದಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ಜಾಲ ತಾಣ http://karnatakatourism.org/ ಅಥವಾ https://kttf.karnatakatourism.org/ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಿದೆ.
ಆನ್‍ಲೈನ್‍ನಲ್ಲಿ ಹೋಂ-ಸ್ಟೇ ನೋಂದಣಿ ಮಾಡಲು ಭಾವಚಿತ್ರ, ಆಧಾರ್ ಕಾರ್ಡ್, ಹೋಂ-ಸ್ಟೇ ಹೊರಾಂಗಣ, ಒಳಾಂಗಣ, ಕೊಠಡಿ ಛಾಯಾಚಿತ್ರಗಳು, ಹೋಂ-ಸ್ಟೇ ಮಾಲೀಕತ್ವದ ದಾಖಲಾತಿ, ಪೊಲೀಸ್ ಇಲಾಖೆಯಿಂದ ನೀಡಲಾಗಿರುವ ನಿರಾಕ್ಷೇಪಣಾ ಪತ್ರ, ಸ್ಥಳೀಯ ಸಂಸ್ಥೆಯವರುಗಳು ನೀಡಿರುವ ನಿರಾಕ್ಷೇಪಣಾ ಪತ್ರ. ವಾಸಸ್ಥಳ ದೃಢೀಕರಣ ಪತ್ರ, ನೋಂದಣಿ ಶುಲ್ಕ ರೂ.500 ಗಳ ಸ್ಕ್ಯಾನ್ ಮಾಡಿದ ದಾಖಲಾತಿಗಳನ್ನು ಅಂತರ್ಜಾಲ ತಾಣದಲ್ಲಿ ಅಪ್‍ಲೋಡ್ ಮಾಡಬೇಕು.
ಇದನ್ನೂ ಓದಿ: ಬಸದಿಯಿಂದ ನಾಪತ್ತೆಯಾಗಿದ್ದ ʼಜೈನ ಮುನಿʼ ಬರ್ಬರ ಹತ್ಯೆ..!
ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕ್ರಮ ಜರುಗಿಸಲಾಗುವುದು ಎಚ್ಚರಿಸಿದ್ದಾರೆ.ಈಗಾಗಲೇ ಪರವಾನಿಗೆ ಪಡೆದು ಹೋಂ-ಸ್ಟೇ ನಡೆಸುತ್ತಿರುವ ಮಾಲೀಕರು ಬರುವಂತಹ ಅತಿಥಿಗಳ ವಾಹನ ಸಂಖ್ಯೆ, ಗುರುತಿನ ಚೀಟಿಯ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು. ಹೋಂ-ಸ್ಟೇಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಅನಧಿಕೃತ ಚಟುವಟಿಕೆಗಳನ್ನು ನಡೆಸಬಾರದು. ಹೋಂ-ಸ್ಟೇಗಳಲ್ಲಿ ಬಳಸುವಂತಹ ಗ್ಯಾಸ್ ಗೀಸರ್/ ಕರೆಂಟ್ ಗೀಸರ್‍ಗಳನ್ನು ಕಾಲಕಾಲಕ್ಕೆ ಸರಿಯಾಗಿ ನಿರ್ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಹೋಂ-ಸ್ಟೇನಲ್ಲಿ ಅಳವಡಿಸುವುದು.
ಹೋಂ-ಸ್ಟೇನಲ್ಲಿರುವ ಸಿ.ಸಿ.ಟಿವಿಯ 45 ದಿನಗಳ ಪುಟೇಜ್‍ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾರಂಗಿ ಹಿನ್ನೀರಿನ ಹಾಗೂ ಬಾಕ್ ವಾಟರ್ ಹಾಗೂ ಕಾವೇರಿ ನದಿ ದಂಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಮಳೆಗಾಲ ಸಮಯದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು. ಈ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ್ ಉಲ್ಲಾಳ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಕಿತ್ತೂರು ಕರ್ನಾಟಕ ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿ
ಇವುಗಳಲ್ಲದೇ ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಈ-ಮೇಲ್ : adkodagutourism@gmail.com ಗೆ ತಿಳಿಸಬಹುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.