ಕಲಬುರಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿಯನ್ನು 2023ರ ಜೂನ್ 18 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಯಡಿ ಲಾಭ ಪಡೆಯಲಿಚ್ಛಿಸುವ ಫಲಾನುಭವಿಗಳಿಗಾಗಿ ವಿಶೇಷವಾಗಿ ಸೃಜಿಸಲಾಗಿರುವ ಕಸ್ಟಮ್ ಮೇಡ್ (custom made) ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ದಲ್ಲಿ ನೋಂದಣಿ ಮಾಡಬೇಕೆಂದು ಕಲಬುರಗಿ ಜೆಸ್ಕಾಂ ನಿಗಮ ಕಚೇರಿಯ ಮುಖ್ಯ ಇಂಜನಿಯರ್ (ಕಾರ್ಯಾಚರಣೆ) ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೊಂದಣಿಗೆ ಇದೇ ಜೂನ್ 18 ರಂದು ರಾಜ್ಯ ಸರ್ಕಾರವು ಚಾಲನೆ ನೀಡಲಿದ್ದು, ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‍ವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‍ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ.


ಅರ್ಹ ಫಲಾನುಭವಿಗಳು ಮೊಬೈಲ್ ,ಕಂಪ್ಯೂಟರ್ ಹಾಗೂ ಲ್ಯಾಪ್‍ಟ್ಯಾಪ್‍ದಲ್ಲಿ ತಂತ್ರಾಂಶದ ಮೂಲಕವೂ ಸಹ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿ (Iಆ) ಮಾಹಿತಿಗಳನ್ನು (ವಿದ್ಯುಚ್ಛಕ್ತಿ ಬಿಲ್‍ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕಾಗುತ್ತದೆ. ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿಯೂ ಸಹ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯುಚ್ಛಕ್ತಿ ಕಚೇರಿಯನ್ನು ಅಥವಾ 24x7 ಸಹಾಯವಾಣಿ 1912ಗೆ ಕರೆ ಮಾಡಬಹುದಾಗಿದೆ.


ಈ ಯೋಜನೆಯು ರಾಜ್ಯದಲ್ಲಿ ಮೊದಲ ಬಾರಿಗೆ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮವಾಗಿದ್ದು, ಇದರಿಂದ ರಾಜ್ಯದ 2 ಕೋಟಿ ಗೃಹ ಬಳಕೆ ಗ್ರಾಹಕರಿಗೆ ಅನುಕೂಲವಾಗಲಿದ್ದು, ಈ ಯೋಜನೆಯು 2023ರ ಆಗಸ್ಟ್ 1 (ಜುಲೈ ಮಾಹೆಯ ವಿದ್ಯುಚ್ಛಕ್ತಿ ಬಳಕೆ) ರಿಂದ ಜಾರಿಗೆ ಬರಲಿದ್ದು, ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ಲನ್ನು ಪಡೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.