ಧರ್ಮ, ಸಂಸ್ಕೃತಿಗಳೆಲ್ಲವೂ ಬಿಜೆಪಿಗೆ ಬೂಟಾಟಿಕೆಯ ತೋರಿಕೆಗಳು ಮಾತ್ರ: ಕಾಂಗ್ರೆಸ್

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಂಜಯ್ ಪಾಟೀಲ್, ರಮೇಶ್ ಜಾರಕಿಹೊಳಿ ಬಳಸಿರುವ ಪದಗಳು ಬಿಜೆಪಿಯ ಭೌದ್ಧಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಕಿಡಿಕಾರಿದೆ.  

Written by - Zee Kannada News Desk | Last Updated : Nov 29, 2021, 07:11 AM IST
  • ಸಂಜಯ್ ಪಾಟೀಲ್, ರಮೇಶ್ ಜಾರಕಿಹೊಳಿ ಬಳಸಿರುವ ಪದಗಳು ಬಿಜೆಪಿಯ ಭೌದ್ಧಿಕ ದಿವಾಳಿತನಕ್ಕೆ ಸಾಕ್ಷಿ
  • ‘ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾಃ’ ಎಂಬ ಮಾತಿನ ಅರ್ಥವನ್ನು ಬಿಜೆಪಿ ತಿಳಿಯಲಿ
  • ಧರ್ಮ, ಸಂಸ್ಕೃತಿಗಳೆಲ್ಲವೂ ಬಿಜೆಪಿಗೆ ಬೂಟಾಟಿಕೆಯ ತೋರಿಕೆಗಳು ಮಾತ್ರ ಎಂದು ಕಾಂಗ್ರೆಸ್ ಕಿಡಿ
ಧರ್ಮ, ಸಂಸ್ಕೃತಿಗಳೆಲ್ಲವೂ ಬಿಜೆಪಿಗೆ ಬೂಟಾಟಿಕೆಯ ತೋರಿಕೆಗಳು ಮಾತ್ರ: ಕಾಂಗ್ರೆಸ್  title=
ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ

ಬೆಂಗಳೂರು: ಬಿಜೆಪಿ ನಾಯಕರ ಪದ ಬಳಕೆ ವಿಚಾರವಾಗಿ ಕಿಡಿಕಾರಿರುವ ಕರ್ನಾಟಕ ಕಾಂಗ್ರೆಸ್, ‘ಧರ್ಮ, ಸಂಸ್ಕೃತಿಗಳೆಲ್ಲವೂ ಬಿಜೆಪಿಗೆ ಬೂಟಾಟಿಕೆಯ ತೋರಿಕೆಗಳು ಮಾತ್ರ’ ಎಂದು ವಾಗ್ದಾಳಿ ನಡೆಸಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ರಮೇಶ್ ಜಾರಕಿಹೊಳಿ(Ramesh Jarkiholi) ನೀಡಿದ್ದ ಪ್ರತಿಕ್ರಿಯೆಯ ವಿಡಿಯೋ ಶೇರ್ ಮಾಡಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

‘ಧರ್ಮ, ಸಂಸ್ಕೃತಿಗಳೆಲ್ಲವೂ ಬಿಜೆಪಿಗೆ ಬೂಟಾಟಿಕೆಯ ತೋರಿಕೆಗಳು ಮಾತ್ರ. ಸಂಜಯ್ ಪಾಟೀಲ್, ರಮೇಶ್ ಜಾರಕಿಹೊಳಿ ಅವರುಗಳು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಅವರಿಗೆ ಬಳಸುವ ಪದಗಳಿಂದ ಬಿಜೆಪಿಯ ಭೌದ್ಧಿಕ ದಿವಾಳಿತನಕ್ಕೆ ಸಾಕ್ಷಿ. ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾಃ ಎಂಬ ಮಾತಿನ ಅರ್ಥವನ್ನು ಬಿಜೆಪಿ ತಿಳಿಯಲಿ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಪ್ರಾಮಾಣಿಕರಾಗಿದ್ದರೆ ಭ್ರಷ್ಟ ರಾಜ್ಯ ಸರ್ಕಾರವನ್ನು ವಜಾ ಮಾಡಲಿ: ಸಿದ್ದರಾಮಯ್ಯ

ಹೆಬ್ಬಾಳ್ಕರ್‌ ಹೆಸರು ಹೇಳುತ್ತಿದ್ದಂತೆ ‘ಥೂ.. ಥೂ..’ ಎಂದಿದ್ದ ಜಾರಕಿಹೊಳಿ

ಬೆಳಗಾವಿ ಸ್ಥಳೀಯ ಸಂಘ ಸಂಸ್ಥೆಯ ವಿಧಾನ ಪರಿಷತ್ ಚುನಾವಣೆ(Karnataka MLC Election 2021)ರಮೇಶ್ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಸ್ಪರ್ಧೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಥೂ.. ಥೂ.. ಎಂದು ಅಂತಾ ಪ್ರತಿಕ್ರಿಯಿಸಿದ್ದರು. ‘ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠರನ್ನು ಗೆಲ್ಲಿಸುವುದು ನಮ್ಮ ಮೊದಲ ಪ್ರಾಶಸ್ತ್ಯ. ಕಾಂಗ್ರೆಸ್ ಸೋಲಿಸುವುದು 2ನೇ ಪ್ರಾಶಸ್ತ್ಯ ಎಂದು ಹೇಳಿದ್ದರು.  

ಪರಿಷತ್ ಚುನಾವಣೆ ರಮೇಶ್ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್(Ramesh Jarkiholi vs Lakshmi Hebbalkar) ಎನ್ನುವ ಮಾತು ಕೇಳಿಬರುತ್ತಿದೆ ಎಂದು ಪತ್ರಕರ್ತರು ಪ್ರಶ್ನೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡದ ಜಾರಕಿಹೊಳಿ ಥೂ… ಥೂ… ಅಂತಾ ಹೇಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವುದು ಒಂದೇ ನಮ್ಮ ಗುರಿ ಎಂದು ಹೇಳಿದ್ದರು. ‘ನಾವು ಲಖನ್ ಜಾರಕಿಹೊಳಿಗೆ 2ನೇ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿಲ್ಲ. ನಮ್ಮ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು’ ಎಂದು ಹೇಳಿದ್ದರು.

ಇದನ್ನೂ ಓದಿ: ಹಂಪಿ ಕನ್ನಡ ವಿವಿ ಮೇಲಿನ ಹಗರಣಗಳ ಆರೋಪಗಳು ಅದರ ಘನತೆಯನ್ನು ಗುಡಿಸಿ ಹಾಕುತ್ತಿವೆ-ಸಿದ್ಧರಾಮಯ್ಯ

ಪಕ್ಷೇತರ ಅಭ್ಯರ್ಥಿಯಾಗಿ ಲಖನ್‌ ಸ್ಪರ್ಧೆ

ಬೆಳಗಾವಿ ಸ್ಥಳೀಯ ಸಂಸ್ಥೆಗಳ ಚುನಾವಣೆ(Karnataka MLC Election)ಗೆ ನಾಮಪತ್ರ ಸಲ್ಲಿಸಲು ಮಂಗಳವಾರ(ನ.30) ಕೊನೆಯ ದಿನವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಲಖನ್ ಜಾರಕಿಹೊಳಿ ನಿರ್ಧರಿಸಿದ್ದಾರೆ. ಈಗಾಗಲೇ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಕಾಂಗ್ರೆಸ್‌ನಿಂದ ಚನ್ನರಾಜ್ ಹಟ್ಟಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್‌ ಜಾರಕಿಹೊಳಿ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದು, ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.   

Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.Twitterನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
https://apple.co/3hEw2hyApple Link - 
https://bit.ly/3hDyh4GAndroid Link - 
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...

 

Trending News