ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ- ನನ್ನ ಬಳಿ ನೋಟಿಸ್ ಇದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಹುಬ್ಬಳ್ಳಿ: ರಾಜ್ಯದಲ್ಲಿ ಒಬಿಸಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಬಳಿಸಿ ಮುಸ್ಲಿಂರಿಗೆ ಕೊಡುತ್ತಿರುವುದು ಸತ್ಯ. ನಮ್ಮ ಬಳಿ ದಾಖಲೆ ಇದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ (Union Minister Pralhad Joshi) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Union Minister Pralhad Joshi), ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಈಗ ಚುನಾವಣೆ ಕಾರಣದಿಂದ, ದಲಿತ ಒಬಿಸಿ ಮೀಸಲಾತಿ ಕಬಳಿಸುತ್ತಿಲ್ಲ. ಮುಸ್ಲಿಂರಿಗೆ ನೀಡುತ್ತಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಜೋಶಿ ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
ಇದನ್ನೂ ಓದಿ- ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿ
ಒಬಿಸಿ ಕಮಿಷನ್ (OBC Commission) ಗೆ ಸಿಎಂ ಪತ್ರ ಬರೆದಿಲ್ಲ ಎಂದಾದರೆ ಹಂಸರಾಜ್ ಅವರು ನೀಡಿರುವ ನೋಟೀಸ್ ಗೆ ಉತ್ತರ ಕೊಡಲಿ ಹಾಗಿದ್ದರೆ ಎಂದು ಇದೇ ವೇಳೆ ಪ್ರಹ್ಲಾದ್ ಜೋಶಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.
ಅತ್ಯಂತ ಅಪಾಯಕಾರಿ: ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಬಳಿಸಿ ತಮ್ಮ ವೋಟ್ ಬ್ಯಾಂಕ್ ಮುಸ್ಲಿಂರಿಗೆ ಕೊಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದರು.
ಸಂವಿಧಾನದಲ್ಲಿ ಅವಕಾಶವಿಲ್ಲ:
ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಸುಪ್ರೀಂ ಕೋರ್ಟ್ ಸಹ ಇದನ್ನು ಸ್ಪಷ್ಟಪಡಿಸಿದೆ ಎಂದರು.
ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ:
ಈ ವಿಷಯದಲ್ಲಿ ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನವೇ ಮುಸ್ಲಿಂರಿಗೆ ಮೀಸಲಾತಿ ವಾಪಸ್ ಕೊಡುವುದಾಗಿ ಹೇಳಿದ್ದು, ಈಗದನ್ನು ಸಾಧಿಸುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.
ಬಿಜೆಪಿ ಸರ್ಕಾರ ಇದ್ದಾಗ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2 ಪರ್ಸೆಂಟ್ ಮೀಸಲಾತಿ ಕಲ್ಪಿಸಲು ಇವರು ವಿರೋಧಿಸಿದ್ದರು ಎಂದು ಜೋಶಿ ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.